Breaking News

ವಿದ್ಯಾರ್ಥಿಗಳು ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್‍ನಿಂದ ದೂರವಿರಬೇಕು: ವಿದ್ಯಾರ್ಥಿಗಳು ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್‍ನಿಂದ ದೂರವಿರಬೇಕು

Spread the love

ಗುರಿ ಸಾಧನೆಗೆ ಬಡತನ ಅಡ್ಡಿಯಾಗುವುದಿಲ್ಲ, ವಿದ್ಯಾರ್ಥಿಗಳು ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್‍ನಿಂದ ದೂರವಿರಬೇಕು. ಪಾಲಕರು ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡಲು ಮುಂದಾಗಬೇಕು ಎಂದು ಮಾಜಿ ವಿಧಾನಪರಿಷತ ಸದಸ್ಯ ಮಹಾಂತೇಶ ಕವಟಗಿಮಠ ತಿಳಿಸಿದರು.

ಚಿಕ್ಕೋಡಿಯ ಕೆಎಲ್‍ಇ ಇಂಜನಿಯರಿಂಗ್ ಕಾಲೇಜಿನಲ್ಲಿ ಪದವಿ ಪೂರ್ವ ವಿಜ್ಞಾನ ವಿಭಾಗದ ವಿಧ್ಯಾರ್ಥಿಗಳ ಸ್ವಾಗತ ಸಮಾರಂಭಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ಇಡೀ ದೇಶಕ್ಕೆ ಸಿಇಟಿ ಪರಿಚಯಿಸಿದ ಹೆಮ್ಮೆ ನಮ್ಮ ರಾಜ್ಯಕ್ಕೆ ಸಲ್ಲುತ್ತೆ.ವಿಧ್ಯಾರ್ಥಿಗಳು ನಿರಂತರವಾಗಿ ಕಠಿಣವಾದ ಪರಿಶ್ರಮ ಮಾಡಿದರೆ ಯಶಸ್ಸು ಸಾಧಿಸಬಹುದು ಎಂದರು..ಪಾಲಕರು ವಿಧ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಜೊತೆಗೆ ಸಂಸ್ಕಾರವನ್ನು ನೀಡಬೇಕು ಎಂದರು.

ನಂತರ ಎಸಿ ಸಂತೋಷ ಕಾಮಗೌಡ ಮಾತನಾಡಿ ಗ್ರಾಮೀಣ ಭಾಗದ ವಿಧ್ಯಾರ್ಥಿಗಳಿಗೆ ಕೆಎಲ್‍ಇ ಕಾಲೇಜು ಒಳ್ಳೆಯ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ವಿದ್ಯಾರ್ಥಿಗಳು ಒಂದು ನಿಶ್ಚಿತ ಗುರಿ ಇಟ್ಟುಕೊಂಡು ಪರಿಶ್ರಮ ಪಟ್ಟರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು. ದೇಶದ ಮಹಾನ ಸಾಧಕರ ತತ್ವ ಆದರ್ಶಗಳನ್ನು ಪಾಲಿಸಿಕೊಂಡು ಹೋಗಬೇಕು ಎಂದು ಸಂತೋಷ ಕಾಮಗೌಡರ ತಿಳಿಸಿದರು.


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ