Home / ಜಿಲ್ಲೆ / ಬೆಳಗಾವಿ / ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭಗೊಂಡು ಜೂನ್ 25 ಕ್ಕೆ ಭರ್ತಿ 7 ವರ್ಷಗಳು

ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭಗೊಂಡು ಜೂನ್ 25 ಕ್ಕೆ ಭರ್ತಿ 7 ವರ್ಷಗಳು

Spread the love

ಜೂನ್ 25 ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭಗೊಂಡು ಜೂನ್ 25 ಕ್ಕೆ ಭರ್ತಿ 7 ವರ್ಷಗಳು ತುಂಬುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಮತ್ತು ವಸತಿ ಮಂತ್ರಾಲಯ ಇವರ
ನಿರ್ದೇಶನದ ಮೇರೆಗೆ ಈ 7ನೇ ವರ್ಷದ ಸಂಭ್ರಮಾಚರಣೆಯನ್ನು ಸ್ಮಾರ್ಟ್ ಸಿಟಿ ಬೆಳಗಾವಿ ಆಡಳಿತ ಮಂಡಳಿ ವಿಭಿನ್ನ ಆಚರಣೆಗೆ ಮುಂದಾಗಿದೆ.

ವಿವಿಧ ಕಾರ್ಯಕ್ರಮಗಳು:
ಸ್ಮಾರ್ಟಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಇಂಟಿಗ್ರೇಟೆಡ್ ಕಮಾಂಡ್ & ಕಂಟ್ರೋಲ್ ಸೆಂಟರ್ (ICCC) ಗೆ ಸರ್ದಾರ ಪ್ರೌಢಶಾಲೆ ಹಾಗೂ ಜೈನ್ ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಕಮಾಂಡ್ ಸೆಂಟರ್‌ನ ಕಾರ್ಯನಿರ್ವಹಣೆ ಮತ್ತು ಸಾರ್ವಜನಿಕರಿಗೆ ಇದರಿಂದಾಗುವ ಸದುಪಯೋಗಗಳ ಕುರಿತು ತಿಳಿಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅದರಂತೆ ಸೋಮವಾರ ಸಂಜೆ 6.30 ಕ್ಕೆ ಸ್ಮಾರ್ಟ ಸಿಟಿ ಲಿಮಿಟೆಡ್ ಅಡಿಯಲ್ಲಿ ಅಭಿವೃದ್ದಿ ಪಡಿಸಲಾದ ಕಾಮಗಾರಿಗಳ ಫೋಟೋಗ್ರಫಿ ಪ್ರದರ್ಶನ ಹಾಗೂ ಪಟವರ್ಧನ ಲೇ ಔಟ್ ಉದ್ಯಾನದಲ್ಲಿ ಹಾಸ್ಯ ಸಂಜೆ ಕಾರ್ಯಕ್ರಮ ಹಮ್ಮಿಕೊಂಡಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ