Breaking News

ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಅಂಗಾಂಗಗಳು ಛಿದ್ರ

Spread the love

ರಾಯಚೂರು: ಬೈಕ್ ಗೆ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ ನಗರದ ಹೊರವಲಯದ ಮರ್ಚೇಡ್ ಕ್ರಾಸ್ ಬಳಿ ಘಟನೆ ನಡೆದಿದೆ.

ಮೃತರನ್ನು ರಾಯಚೂರು ತಾಲೂಕಿನ ತಿಮ್ಮಾಪುರ ಗ್ರಾಮದ ತಿಪ್ಪಣ್ಣ(18) ಹಾಗೂ ಲಿಂಗಪ್ಪ(18) ಎಂದು ಗುರುತಿಸಲಾಗಿದೆ.

ಉದಯ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ