Home / ರಾಜಕೀಯ / 1 ವರ್ಷದಲ್ಲಿ ಹು-ಧಾ ಎಲ್ಲಾ ಸ್ಮಾರ್ಟ ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಸಿಎಂ ಬೊಮ್ಮಾಯಿ

1 ವರ್ಷದಲ್ಲಿ ಹು-ಧಾ ಎಲ್ಲಾ ಸ್ಮಾರ್ಟ ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಸಿಎಂ ಬೊಮ್ಮಾಯಿ

Spread the love

ಮುಂದಿನ ಒಂದು ವರ್ಷದ ಅವಧಿಯೊಳಗೆ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು.ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಮತ್ತು ಆ ಮೂಲಕ ಕಾರವಾರ ಬಂದರಿಗೆ ಸಂಪರ್ಕ ಕಲ್ಪಿಸುವ ಯೋಜನೆಯು ಅರಣ್ಯ ಹಾಗೂ ಪರಿಸರ ಮಂತ್ರಾಲಯದ ಕ್ಲಿಯರೆನ್ಸ್ ಪಡೆಯುವ ಹಂತದಲ್ಲಿದೆ ಶೀಘ್ರ ಯೋಜನೆ ಕೈಗೆತ್ತಿಕೊಳ್ಳುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಘಂಟಿಕೇರಿಯ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ,ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆ ಅನುದಾನದಡಿ ನಗರಪ್ರದೇಶದ ಬಡವರ್ಗಗಳ ಪ್ರದೇಶದಲ್ಲಿ ಸುಮಾರು 34 ಕೋಟಿ ರೂ.ವೆಚ್ಚದ ವಿವಿಧ ಮೂಲಸೌಕರ್ಯಗಳ ಲೋಕಾರ್ಪಣೆ ನೆರವೇರಿಸಿ ಅವರು ಮಾತನಾಡಿದರು.

ಹುಬ್ಬಳ್ಳಿಯಲ್ಲಿ ಹುಟ್ಟಿ ಬೆಳೆದಿರುವ ತಮಗೆ ಇಲ್ಲಿನ ಎಲ್ಲಾ ಪ್ರದೇಶಗಳ ಬಹುತೇಕ ಸಮಸ್ಯೆಗಳು ತಿಳಿದಿವೆ.ಮುಖ್ಯ ಕಾಲುವೆಯ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು.ಅಭಿವೃದ್ಧಿಯಲ್ಲಿ ಯಾವುದೇ ತಾರತಮ್ಯಕ್ಕೆ ಆಸ್ಪದವಿಲ್ಲ.300 ಕೋಟಿ ರೂ.ವೆಚ್ಚದಲ್ಲಿ ಜಯದೇವ ಹೃದ್ರೋಗ ಕೇಂದ್ರ ಸ್ಥಾಪನೆಗೆ ಅಗಸ್ಟ್ ತಿಂಗಳಲ್ಲಿ ಅಡಿಗಲ್ಲು ಸಮಾರಂಭ ಹಮ್ಮಿಕೊಳ್ಳಲಾಗುವುದು.ಎಫ್ಎಂಸಿಜಿ ಕ್ಲಸ್ಟರ್ ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಜನೆಯ ಬಜೆಟ್ ಘೋಷಣೆಯ ಅನುಷ್ಠಾನಕ್ಕೆ ಆದೇಶ ಹೊರಡಿಸಲಾಗಿದೆ.ತುಮಕೂರು-ದಾವಣಗೆರೆ ಹಾಗೂ ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಅನುಮೋದನೆ ದೊರೆತಿದೆ.ಹಳೆ ಹುಬ್ಬಳ್ಳಿ ಭಾಗದ ರೈತರ ಬೇಡಿಕೆಯಂತೆ ಇಲ್ಲಿ ಪಶು ವೈದ್ಯಕೀಯ ಪಾಲಿಕ್ಲಿನಿಕ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಯವರು ಭರವಸೆ ನೀಡಿದರು .

ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ