ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಶಿವಸೇನೆಯ ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರ Y ಶ್ರೇಣಿ ಭದ್ರತೆ ನೀಡಿದೆ.
ಮಹಾ ವಿಕಾಸ ಅಘಾಡಿ ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಸಚಿವ ಏಕನಾಥ್ ಶಿಂಧೆ ನೇತೃತ್ವದ ಶಾಸಕರ ಟೀಂ ಗುವಾಹಟಿ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದು, ಪರಿಸ್ಥಿತಿ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ, ಸರ್ಕಾರ ರಚನೆಗೆ ಕಸರತ್ತು ನಡೆಸಿದೆ.
ಇದೀಗ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆಯ 15 ಶಾಸಕರಿಗೆ ಕೇಂದ್ರ ಗೃಹ ಸಚಿವಾಲಯ ಸಿ ಆರ್ ಪಿ ಎಫ್ ಭದ್ರತೆ ನೀಡಲು ಸೂಚಿಸಿದೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಶಾಸಕರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದಿತ್ತು. ಇದರ ಬೆನ್ನಲ್ಲೇ ಬಂಡಾಯ ಶಾಸಕರಿಗೆ ಕೇಂದ್ರ ಗೃಹ ಇಲಾಖೆ ಭದ್ರತೆ ಒದಗಿಸುವಂತೆ ಸಿ ಆರ್ ಪಿ ಎಫ್ ನಿರ್ದೇಶಕರಿಗೆ ಸೂಚಿಸಿದೆ.