ಧಾರವಾಡ: ಲ್ಯಾಪ್ ಟಾಪ್ ವಿತರಿಸುವಂತೆ ವಿವಿಧ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಕೊರೊನಾ ಸಂಕಷ್ಟದಿಂದಾಗಿ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ವಿಳಂಬವಾಗಿದೆ. ಈ ಮೊದಲು ಲ್ಯಾಪ್ ಟ್ಯಾಪ್ ವಿತರಿಸುವುದಾಗಿ ಹೇಳಿದ ವಿವಿ, ಇದೀಗ ಅನುದಾನ ಕೊರತೆ ನೆಪವೊಡ್ಡಿದೆ. ಕರ್ನಾಟಕ ವಿಶ್ವ ವಿದ್ಯಾಲಯ ಆವರಣದಲ್ಲಿ ಕಳೆದ ಮೂರು ದಿನಗಳಿಂದ ವಿದ್ಯಾರ್ಥಿಗಳು ಧರಣಿ ಕುಳಿತಿದ್ದಾರೆ.
ಇನ್ನು ಕಳೆದ ಹಲವು ತಿಂಗಳಿನಿಂದ ವಿದ್ಯಾರ್ಥಿಗಳಿಗೆ ಮಾಸಿಕ ಸ್ಟೈಂಪಡ್ ಕೂಡ ವಿತರಿಸಿಲ್ಲ. ಅಂತಿಮ ವರ್ಷದ ವಿದ್ಯಾರ್ಥಿಗಳು ಕಿರು ಪ್ರಬಂಧ ಖಡ್ಡಾಯವಾಗಿರುವುದರಿಂದ ಪ್ರವಾಸಕ್ಕಾಗಿ ಖರ್ಚು ಮಾಡಿದ ಹಣವನ್ನು ವಿವಿ ಭರ್ತಿ ಮಾಡುವುದು ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಧರಣಿ ಆರಂಭಿಸಿದ್ದಾರೆ.
ಧರಣಿ ಸ್ಥಳಕ್ಕೆ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿಯಾಗಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರುಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು. ಕುಲಪತಿಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಸೌಲಭ್ಯಗಳ ಒದಗಿಸಲು ಕ್ರಮ ಕೈಗೊಳ್ಳುವುದು- ಸತೀಶ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ
ವಿಧಾನ ಪರಿಷತ್ ಸದಸ್ಯ ಶ್ರೀಮನ್ ಮಾನೆ ಸೇರಿದಂತೆ ಮುಂತಾದವರು ಇದ್ದರು.