Breaking News

ಹುಬ್ಬಳ್ಳಿ : ಪ್ರೇಮ ವೈಫಲ್ಯಕ್ಕೆ ನೊಂದು ನೇಣಿಗೆ ಶರಣಾದ ಯುವಕ

Spread the love

ಹುಬ್ಬಳ್ಳಿ : ಯುವಕನೋರ್ವ ಪ್ರೇಮ ವೈಫಲ್ಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಕೊಟ್ರೇಶ್ ಮಠಪತಿ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.

ಕೂಲಿ ಕಾರ್ಮಿಕನಾಗಿದ್ದ ಕೊಟ್ರೇಶ್ ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆ ಯುವತಿಗೆ ಬೇರೆ ಹುಡುಗನ ‌ಜೊತೆ ಮದುವೆ ನಿಶ್ಚಯವಾಗಿದೆ. ಇದರಿಂದ ಮನನೊಂದು ಕೊಟ್ರೇಶ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ