Home / ರಾಜಕೀಯ / ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ಸಹಾಯಧನ; ಮಾರ್ಗಸೂಚಿ ಬಿಡುಗಡೆ

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ಸಹಾಯಧನ; ಮಾರ್ಗಸೂಚಿ ಬಿಡುಗಡೆ

Spread the love

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್‌ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ‘ಕಾಶಿ ಯಾತ್ರೆ’ಗೆ ಸೋಮವಾರ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.

 

ಇಂದು ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ ಭವ್ಯತೆಯನ್ನ ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಿಂದ ಅಭಿವೃದ್ದಿಗೊಳಿಸಲಾಗಿದೆ. ಈ ಭವ್ಯ ಕಾಶಿಯ ಯಾತ್ರೆ ಬಹಳಷ್ಟು ಜನರ ಜೀವನದ ಅಭಿಲಾಷೆಯಾಗಿರುತ್ತದೆ. ಈ ಯಾತ್ರೆಯ ಅಭಿಲಾಷೆಯನ್ನು ಪೂರೈಸುವ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ಯೋಜನೆಯನ್ನು ಪ್ರಾರಂಭಿಸಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಆಯವ್ಯಯದಲ್ಲಿ ಹಣ ಘೋಷಣೆ ಮಾಡಿದ್ದರು.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ