Breaking News
Home / ಮೂಡಲಗಿ / ಬಂಟ್ವಾಳ: ಪೊಲೀಸರಿಗೆ ದೂರು ನೀಡಿದ್ದಕ್ಕೆ ಸಿಟ್ಟು… ಹಾಡಹಗಲೇ ಮಹಿಳೆಗೆ ಇರಿದು ಕೊಂದ

ಬಂಟ್ವಾಳ: ಪೊಲೀಸರಿಗೆ ದೂರು ನೀಡಿದ್ದಕ್ಕೆ ಸಿಟ್ಟು… ಹಾಡಹಗಲೇ ಮಹಿಳೆಗೆ ಇರಿದು ಕೊಂದ

Spread the love

ಬಂಟ್ವಾಳ(ದಕ್ಷಿಣ ಕನ್ನಡ): ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಕೊಡಾಜೆ ಗಣೇಶ್ ನಗರದಲ್ಲಿ ಹಾಡಹಗಲೇ ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ.

ಶಕುಂತಳಾ ಮೃತ ಮಹಿಳೆಯಾಗಿದ್ದು, ಆರೋಪಿ ಶ್ರೀಧರ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಶಕುಂತಳಾ ಸುಮಾರು 5 ವರ್ಷಗಳಿಂದ ಪುತ್ತೂರಿನ ಕೊಂಬೆಟ್ಟುವಿನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಕಳೆದ ಒಂದು ವರ್ಷದಿಂದ ಸ್ಕೂಟರ್​​ನಲ್ಲಿ ಪುತ್ತೂರಿಗೆ ಹೋಗಿ ಬರುತ್ತಿದ್ದರು. ಕೆಲ ತಿಂಗಳುಗಳ ಹಿಂದೆ ಯಮನಾಜೆ ಎಂಬಲ್ಲಿನ ನಿವಾಸಿ ಶ್ರೀಧರ್​ ಮಹಿಳೆಯ ಮನೆ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನಂತೆ. ಬಳಿಕ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೇ ಕಾರಣಕ್ಕೆ ಶ್ರೀಧರ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೊಡಾಜೆಯಲ್ಲಿ ಆರೋಪಿಯು ಮಹಿಳೆಗೆ ಏಕಾಏಕಿ ಚೂರಿಯಿಂದ ಇರಿದಿದ್ದಾನೆ. ಗಾಯಗೊಂಡ ಆಕೆಯನ್ನು ಮಾಣಿಯಿಂದ ಆಯಂಬುಲೆನ್ಸ್​ ಮೂಲಕ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಹಿಳೆಯ ಪತಿ‌ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಈ ಕೃತ್ಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎಸ್​​ಪಿ ಋಷಿಕೇಶ್ ತಿಳಿಸಿದ್ದಾರೆ.

 


Spread the love

About Laxminews 24x7

Check Also

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿ

Spread the love ಬೆಂಗಳೂರು: ನಿರೀಕ್ಷೆಯಂತೆ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ನಿವೃತ್ತ ಐಎಎಸ್ ಅಧಿಕಾರಿ ಎ.ಎಸ್. ಪುಟ್ಟಸ್ವಾಮಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ