Breaking News

ಬಡವರ ಕಲ್ಯಾಣ ಕೇಂದ್ರ ಸರ್ಕಾರದ ಆಶಯ: ಸಚಿವ ಸೋಮ ಪ್ರಕಾಶ

Spread the love

ಬೆಳಗಾವಿ: ಕೇಂದ್ರ ಸರ್ಕಾರವು ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಬಡವರು ಹಾಗೂ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ದೇಶವು ಆರ್ಥಿಕ ಪ್ರಾಬಲ್ಯದತ್ತ ದಾಪುಗಾಲು ಹಾಕುತ್ತಿದೆ ಎಂದು ಕೇಂದ್ರ‌ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವ ಸೋಮ‌ ಪ್ರಕಾಶ ಹೇಳಿದರು.

 

ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಆಯೋಜಿಸಿದ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಜತೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

2014ಕ್ಕಿಂತ ಮುಂಚಿತವಾಗಿ ದೇಶದಲ್ಲಿ ಇದ್ದ ಪರಿಸ್ಥಿತಿ ಈಗ ಸಂಪೂರ್ಣ ಭಿನ್ನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹೊಸಭರವಸೆ ಎಲ್ಲರಲ್ಲಿ ಗರಿಗೆದರಿವೆ. ಸೇವೆ, ಉತ್ತಮ ಆಡಳಿತ ಹಾಗೂ ಬಡವರ ಕಲ್ಯಾಣ ಎಂಬ ಧ್ಯೇಯದೊಂದಿಗೆ ದೇಶವನ್ನು ವಿಶ್ವಗುರುವಾಗಿಸಲು ಸಂಕಲ್ಪ ಮಾಡಲಾಗಿದೆ ಎಂದರು.

ಸ್ಟಾರ್ಟ್‌ಅಪ್ ಕೈಗಾರಿಕೆಗಳಿಂದ ದೇಶದ ಔದ್ಯೋಗಿಕ ರಂಗದಲ್ಲಿ ವಿಕಾಸವಾಗುತ್ತಿದೆ ಎಂದರು.


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ