Breaking News

ಮಹಾರಾಷ್ಟ್ರ ಬಂಡಾಯಕ್ಕೆ ಬಿಜೆಪಿಯೇ ಹಿಂದಿನ ಸೀಟಿನ ಚಾಲಕ: ಎಚ್‌.ಕೆ.ಪಾಟೀಲ ಕಿಡಿ

Spread the love

ಗದಗ: ‘ಮಹಾರಾಷ್ಟ್ರದ ಬಂಡಾಯದ ಹಿಂದೆ ಬಿಜೆಪಿ ಇದೆ. ಬಿಜೆಪಿಯೇ ಅದರ ಹಿಂದಿನ ಸೀಟಿನ ಚಾಲಕ’ ಎಂದು ಶಾಸಕ ಎಚ್‌.ಕೆ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಬಿಜೆಪಿಯವರು ಈ ಹಿಂದೆ ಕರ್ನಾಟಕದಲ್ಲಿ 17 ಮಂದಿ ಶಾಸಕರ ರಾಜೀನಾಮೆ ಕೊಡಿಸಿ, ಸಮ್ಮಿಶ್ರ ಸರ್ಕಾರ ಬೀಳಿಸಿದರು.

ಅಪರೇಷನ್ ಕಮಲದ ಮುಂದಿನ ಭಾಗವಾಗಿ ಮಹಾರಾಷ್ಟ್ರದಲ್ಲಿ ಇಡೀ ಪಕ್ಷವನ್ನೇ ಒಡೆಯಲು ಬಿಜೆಪಿ ಮುಂದಾಗಿದೆ’ ಎಂದು ಅವರು ಆರೋಪ ಮಾಡಿದರು.

‘ದೇಶದ ಜನರನ್ನು ಭಯದ ನೆರಳಿನಲ್ಲಿ ಇಟ್ಟು ರಾಜ್ಯಭಾರ ನಡೆಸಲು ಸಾಧ್ಯವಿಲ್ಲ. ಜನರು ಶಿವಸೇನೆಯ ಜತೆಗಿದ್ದಾರೆ. ಇಂತಹ ಸನ್ನಿವೇಶಗಳನ್ನು ಸೃಷ್ಟಿಸುತ್ತಿರುವ ಬಿಜೆಪಿಗೆ ಬರುವ ದಿನಗಳಲ್ಲಿ ಜನರೇ ಪಾಠ ಕಲಿಸಲಿದ್ದಾರೆ. ಕಾಂಗ್ರೆಸ್‍ನ 44 ಶಾಸಕರು ಒಗ್ಗಟ್ಟಾಗಿದ್ದೇವೆ. ಸರ್ವಾನುಮತದಿಂದ ಮಹಾ ವಿಕಾಸ ಅಘಾಡಿಯನ್ನು ಬೆಂಬಲಿಸಲು ನಿರ್ಣಯಿಸಿದ್ದೇವೆ’ ಎಂದು ಹೇಳಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ