Breaking News

ಬೆಳಗಾವಿ ಬಳಿ ಕ್ರೂಸರ್ ಪಲ್ಟಿ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ

Spread the love

ಬೆಳಗಾವಿ: ಬೆಳಗಾವಿ ತಾಲೂಕಿನ ಕಲ್ಯಾಳ್ ಸೇತುವೆ ಬಳಿ ಭಾನುವಾರ ಸಂಭವಿಸಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದಾರೆ. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದೆ. ಕಿರಣ್ ಅಶೋಕ್ ಕಳಸಣ್ಣವರ್ ಮೃತ ಕಾರ್ಮಿಕ.

ಮೃತ ಕಿರಣ್ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ನಿವಾಸಿಯಾಗಿದ್ದಾರೆ. ಭಾನುವಾರ ಬೆಳಗ್ಗೆ ಕಳ್ಯಾಳ್ ಸೇತುವೆ ಬಳಿ ಕ್ರೂಸರ್ ಪಲ್ಟಿಯಾಗಿ ಭೀಕರ ಅಪಘಾತ ನಡೆದಿತ್ತು. ಸ್ಥಳದಲ್ಲೇ 7 ಮಂದಿ ಕಾರ್ಮಿಕರು ಮೃತಪಟ್ಟು, 14 ಜನ ಕಾರ್ಮಿಕರು ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಿರಣ್​ ಅವರನ್ನು ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಕಿರಣ್ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ