Breaking News

ಇಡಿ ನೋಟಿಸ್, ಪಾರ್ಟಿ ಮೀಟಿಂಗ್: ದೆಹಲಿಗೆ ಹೊರಟ ಡಿ.ಕೆ .ಶಿ.

Spread the love

ಬೆಂಗಳೂರು: ಇಡಿ ನೋಟಿಸ್ ಮತ್ತು ಪಕ್ಷದ ಸಭೆಗಳಲ್ಲಿ ಭಾಗಿಯಾಗುವ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ಹೊರಟಿದ್ದಾರೆ.

ಇದಕ್ಕೂ ಮೊದಲು ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ನಮ್ಮ ಪಕ್ಷದ ಸಭೆಯಿದೆ.

ಭಾರತ ಜೋಡು ಅಭಿಯಾನದ ಬಗ್ಗೆ ಸಭೆಯಿದೆ. ಇನ್ನೂ ಹಲವಾರು ವಿಚಾರಗಳು ಅಲ್ಲಿ ಚರ್ಚೆಯಾಗುತ್ತದೆ ಎಂದರು.

ಇಡಿ ಕೇಸ್ ಇದೆ, ನನಗೆ ನೋಟಿಸ್ ಕೊಟ್ಟಿದ್ದಾರೆ. ಒಂದನೇ ತಾರೀಕು ವಿಚಾರಣೆಗೆ ಹಾಜರಾಗಬೇಕಿದೆ, ಅದಕ್ಕೆ ಈಗ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡಿಕೆಶಿ ಹೇಳಿದರು.

ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಬಗ್ಗೆ ಕೇಳಿದ ಪ್ರಶ್ನೆಗೆ, ಅವನ್ನೆಲ್ಲ ಹೇಳುಲಾಗುವುದಿಲ್ಲ. ಸಮಯ ಸಿಕ್ಕರೆ ಭೇಟಿಯಾಗುತ್ತೇನೆ ಎಂದು ಉತ್ತರಿಸಿದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ