Breaking News

ಬ್ರದರ್ ಬ್ರದರ್. ಎನ್ನುವ ಕೈ ನಾಯಕ ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಕನ್ಹಯ್ಯ ಹತ್ಯೆ ಖಂಡಿಸಿ ಪ್ರತಾತ್​ ಸಿಂಹ ತರಾಟೆ

Spread the love

ಮೈಸೂರು: ದನಗಳ್ಳರಿಗೆ ಎರಡೇಟು ಬಿದ್ದರೆ ಆಕಾಶ-ಭೂಮಿ ಒಂದಾಗುವ ರೀತಿ ಬೊಬ್ಬೆ ಹಾಕುವವರು ಈಗ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ? ಬ್ರದರ್ ಬ್ರದರ್ ಎಂದು ಹೇಳುವ ಕಾಂಗ್ರೆಸ್ ನಾಯಕ ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಟ್ವೀಟ್ ಮಾಡಿ ಮನೆಯೊಳಗೆ ಕುಳಿತರೆ ಮುಗೀತಾ ನಿಮ್ಮ ಕೆಲಸ?

ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್​ ಸಿಂಹ ಕಿಡಿಕಾರಿದ್ದಾರೆ.

ಪ್ರವಾದಿ ಮುಹಮ್ಮದ್​ ವಿರುದ್ಧ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಬಿಜೆಪಿ ನಾಯಕಿ ನೂಪುರ್​ ಶರ್ಮಾರನ್ನು ಬೆಂಬಲಿಸಿ, ಪೋಸ್ಟ್​ ಹಾಕಿದ್ದ ಹಿಂದು ವ್ಯಕ್ತಿ ಕನ್ಹಯ್ಯ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದು, ಇಡೀ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಹಿಂದು ವ್ಯಕ್ತಿ ಹತ್ಯೆಯಾದರೂ ರಾಜ್ಯ ಕಾಂಗ್ರೆಸ್​ ನಾಯಕರು ಸುಮ್ಮನಿದ್ದಾರೆ ಎಂದು ಆಕ್ರೋಶ ಹೊರಹಾಕಿದ ಪ್ರತಾಪ್​ ಸಿಂಹ, ಕರ್ನಾಟಕದಲ್ಲೂ ಕಾಂಗ್ರೆಸ್​ಗೆ ಅಧಿಕಾರ ಕೊಟ್ಟರೆ ರಾಜಸ್ಥಾನದ ಘಟನೆ ಇಲ್ಲಿಯೂ ಆಗುತ್ತೆ. ಇದು ಕರ್ನಾಟಕದ ಜನರಿಗೆ ಎಚ್ಚರಿಕೆ ಗಂಟೆ. ಟಿಪ್ಪು ಸಂತತಿಗಳ ಬಗ್ಗೆ ಮತದಾರರು ಜಾಗೃತರಾಗಿರಬೇಕು. ರಾಜಸ್ಥಾನ ಸರ್ಕಾರದ ಮೇಲೆ ನನಗೆ ವಿಶ್ವಾಸವಿಲ್ಲ. ಹಿಂದುಗಳ ಧ್ವನಿ ಅಡಗಿಸಲು ಈ ಕೃತ್ಯ ನಡೆದಿದೆ. ಇದರ ಹಿಂದೆ ಕಾಂಗ್ರೆಸ್ ಇದೆ. ಕಾಂಗ್ರೆಸ್​ನವರ ಮುಸ್ಲಿಂ ಓಲೈಕೆಯಿಂದ ಈ ರೀತಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ