Breaking News

ಪಣಜಿಯಲ್ಲಿ ‘ಶಿಂದೆ ಸೇನಾ’ ಶಾಸಕರ ಸಭೆ: ಮುಂಬೈನತ್ತ ಏಕನಾಥ್

Spread the love

ಪಣಜಿ: ಶಿವಸೇನೆ ಬಂಡಾಯ ಶಾಸಕರು ಅಂದರೆ ಏಕನಾಥ್ ಶಿಂದೆ ಗುಂಪಿನ ಶಾಸಕರು ಕಳೆದ ರಾತ್ರಿಯೇ ಗೋವಾಗೆ ಆಗಮಿಸಿದ್ದಾರೆ. ಪಣಜಿಯ ತಾಜ್ ಕನ್ವೆನ್ಷನ್ ಸೆಂಟರ್ ಹೊಟೇಲಿನಲ್ಲಿ ಎಲ್ಲರಿಗೂ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ಇನ್ನೇನು ಕೆಲವೇ ಸಮಯದಲ್ಲಿ ಬಂಡಾಯ ಶಾಸಕರು ಮಹತ್ವದ ಸಭೆ ನಡೆಸಲಿದ್ದು, ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ನಂತರ ಬಂಡಾಯ ಶಾಸಕರು ನಡೆಸುತ್ತಿರುವ ಮೊದಲ ಸಭೆ ಇದಾಗಿದೆ. ಈ ಮಧ್ಯೆ ಕೆಲವೇ ಸಮಯದಲ್ಲಿ ಏಕನಾಥ್ ಶಿಂದೆ ಸ್ವತಃ ಮುಂಬೈಗೆ ತೆರಳಲಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ತಮ್ಮ ಬೆಂಬಲಕ್ಕೆ ನಿಂತಿರುವ ಎಲ್ಲ ಶಾಸಕರ ಬೆಂಬಲದ ಸಹಿ ಇರುವ ಪತ್ರದೊಂದಿಗೆ ಏಕನಾಥ್ ಶಿಂದೆ ಮುಂಬೈಗೆ ಆಗಮಿಸಲಿದ್ದಾರೆ.

ಮಹಾರಾಷ್ಟ್ರ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳಾಗುತ್ತಿದ್ದು, ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ನಡೆಯತ್ತ ಎಲ್ಲರ ದೃಷ್ಟಿ ಈಗ ನೆಟ್ಟಿದೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ