Breaking News

ಎಸಿಬಿಯೇ ಭ್ರಷ್ಟಾಚಾರದ ಕೂಪ- ಕರ್ನಾಟಕ ಹೈಕೋರ್ಟ್ ಕಿಡಿ

Spread the love

ಬೆಂಗಳೂರು,ಜೂ.29: ಭ್ರಷ್ಟಾಚಾರ ನಿಗ್ರಹ ದಳವೇ ಅತಿದೊಡ್ಡ ಭ್ರಷ್ಟರ ಕೂಪವಾಗಿದೆ, ಅದರ ಮುಖ್ಯಸ್ಥ ಎಡಿಜಿಪಿಯೇ ಕಳಂಕಿತ ಅಧಿಕಾರಿ ಎಂದು ಹೈಕೋರ್ಟ್ ಬುಧವಾರ ಕಿಡಿ ಕಾರಿದೆ.

”ಎಸಿಬಿ ಕಚೇರಿಗಳೆಲ್ಲಾ ಕಲೆಕ್ಷನ್‌ ಸೆಂಟರ್‌ಗಳಾಗಿವೆ ಎಂದು ಖಾರವಾಗಿ ಹೇಳಿದ ನ್ಯಾಯಪೀಠ ಹಿರಿಯ ಎಎಸ್‌, ಐಪಿಎಸ್‌ ಅಧಿಕಾರಿಗಳನ್ನು ಹಿಡಿಯೋದು ಬಿಟ್ಟು ಸಣ್ಣಪುಟ್ಟ ಬಾಲಂಗೋಚಿಗಳನ್ನು ಹಿಡಿಯುತ್ತೀರಿ, ನಿಮಗೆ ನಾಚಿಗೆ ಆಗಲ್ವೇ” ಎಂದು ಕೇಳಿದೆ.

 

ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪ ತಹಶೀಲ್ದಾರ್ ಪಿ.ಎಸ್‌. ಮಹೇಶ್‌ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್‌, ಎಸಿಬಿ ಕಾರ್ಯವೈಖರಿಯನ್ನು ಹಿಗ್ಗಾಮುಗ್ಗಾ ಜಾಡಿಸಿದರು.

”ಎಸಿಬಿ ಏಕೆ ರಚನೆಯಾಗಿದೆ ನಿಮಗೆ ಗೊತ್ತಾ, ಎಸಿಬಿಯೇ ಭ್ರಷ್ಟಾಚಾರದ ದಂಧೆ ನಡೆಸುತ್ತಿದೆ. ಸರ್ಕಾರ ಉದ್ದೇಶಪೂರ್ವಕವಾಗಿ ಕಳಂಕಿತರನ್ನುಅಲ್ಲಿಗೆ ಕಳುಹಿಸುತ್ತದೆ. ಕಂದಾಯ ಅಧಿಕಾರಿಗಳ ಬಳಿ ಹೋಗಿ ಅಲ್ಲಿ ಏನೇನೆಲ್ಲಾ ಆಗುತ್ತದೆ ಎಂದು ನಿಮಗೆ ತಿಳಿಯುತ್ತದೆ. ಸಮಾಜಕ್ಕೆ ಅಂಟಿರುವ ಭ್ರಷ್ಟಾಚಾರದ ಈ ಕ್ಯಾನ್ಸರ್‌ನಲ್ಲಿ ಮೇಲ್ಮಟ್ಟದ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡದೇ ಕೆಳ ಹಂತದ ಅಧಿಕಾರಿಗಳನ್ನು ಮಾತ್ರ ಆರೋಪಿಗಳನ್ನಾಗಿ ಮಾಡಲಾಗುತ್ತಿದೆ” ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ