Breaking News

ಸೆಪ್ಟೆಂಬರ್ 21 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭ……CONDITIONS APPLY………..

Spread the love

ಬೆಂಗಳೂರು: ಸೆಪ್ಟೆಂಬರ್ 21 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, 9-12 ನೇ ತರಗತಿ ಪ್ರಾರಂಭ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

.ಕೇಂದ್ರ ಸರ್ಕಾರದ ಅನುಮತಿ ಮೇಲೆ ಶಾಲಾ-ಕಾಲೇಜು ಪ್ರಾರಂಭಕ್ಕೆ ಇಲಾಖೆ ನಿರ್ಧಾರ ಮಾಡಿದ್ದು, ಆರೋಗ್ಯ ಇಲಾಖೆ ಶಾಲಾ-ಕಾಲೇಜುಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. 2-3 ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲಿಸಿ ಶಾಲೆಗಳ ಪ್ರಾರಂಭ ಮಾಡಲು ಇಲಾಖೆ ತೀರ್ಮಾನ ಮಾಡಿದೆ.

ಸೆಪ್ಟೆಂಬರ್ 21 ರಿಂದ ಕೇವಲ 9-12 ನೇ ತರಗತಿಗಳು ಮಾತ್ರ ಪ್ರಾರಂಭ ಆಗಲಿದೆ. ಬಳಿಕ ಹಂತ ಹಂತವಾಗಿ ಉಳಿದ ತರಗತಿಗಳು ಪ್ರಾರಂಭಕ್ಕೆ ಚಿಂತನೆ ನಡೆಸಲಾಗಿದೆ.

ಶಾಲಾ ಮಾರ್ಗಸೂಚಿಗಳೇನು?
* ಮಕ್ಕಳು ಶಾಲೆಗೆ ಕಡ್ಡಾಯವಾಗಿ ಬರುವಂತೆ ಒತ್ತಾಯ ಮಾಡುವಂತಿಲ್ಲ.
* ಶಾಲೆಗೆ ಬರುವ ಪ್ರತಿ ವಿದ್ಯಾರ್ಥಿಯೂ ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು.
* ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರದಲ್ಲಿ ಕುಳಿತುಕೊಳ್ಳಲು ಡೆಸ್ಕ್ ವ್ಯವಸ್ಥೆ ಮಾಡಬೇಕು.
* ಪ್ರತಿ ದಿನ ಮಕ್ಕಳಿಗೆ ಥರ್ಮಲ್ ಸ್ಕ್ಯಾನಿಂಗ್ ನಡೆಸಬೇಕು.
* ಮಕ್ಕಳು ಹಾಗೂ ಸಿಬ್ಬಂದಿ ಮಾಸ್ಕ್, ಸ್ಯಾನಿಟೈಸ್ ಬಳಸುವುದು ಕಡ್ಡಾಯ.
* ಪ್ರತಿ ಕೊಠಡಿಗಳು ನಿತ್ಯ ಸ್ಯಾನಿಟೈಸ್ ಆಗಬೇಕು.
* ಮಕ್ಕಳು ಶಾಲಾ-ಆವರಣದಲ್ಲಿ ಗುಂಪು ಕಟ್ಟದಂತೆ ಎಚ್ಚರವಹಿಸಬೇಕು.

* ಶೌಚಾಲಯ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.
* ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಇರಬೇಕು.
* ಲೈಬ್ರರಿಯಲ್ಲಿ ಹೆಚ್ಚು ಮಕ್ಕಳು ಸೇರದಂತೆ ಕ್ರಮವಹಿಸಬೇಕು.
* ಆಟ, ಊಟ, ಪ್ರಾರ್ಥನೆ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ವ್ಯವಸ್ಥೆ ಮಾಡಬೇಕು.
* ಗುಂಪು ಕ್ರೀಡೆಗೆ ಅವಕಾಶವಿಲ್ಲ.
* ಮಕ್ಕಳು ಶಾಲೆಗೆ ಬರುವಾಗ, ಹೋಗುವಾಗ ಸಾಮಾಜಿಕ ಅಂತರದಲ್ಲಿ ಇರುವಂತೆ ಕ್ರಮವಹಿಸಬೇಕು.
* ಶಾಲಾ ಸಿಬ್ಬಂದಿ ಮಾಸ್ಕ್, ಗ್ಲೌಸ್ ಹಾಕಿಕೊಳ್ಳುವುದು ಕಡ್ಡಾಯ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ