ಮೈಸೂರು: ನನಗೆ ಸಿಎಂ ಆಗುವ ಎಲ್ಲಾ ಅರ್ಹತೆಯಿದೆ. ಹಣೆ ಬರಹದಲ್ಲಿ ಬರೆದಿದ್ದರೆ ನಾನೂ ಸಿಎಂ ಆಗ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಮೈಸೂರಿನಲ್ಲಿಂದು ಪ್ರತ್ಯೇಕ ರಾಜ್ಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇನೆ ಹೊರತು ಬೇರೆ ಉದ್ದೇಶ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಇರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಸಿಎಂ ಆಗಿವ ಎಲ್ಲಾ ಅರ್ಹತೆ ಇದೆ. ನಾನು ಸಿಎಂ ಆಗಬೇಕಾದರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ. ಆದರೆ ಸಿಎಂ ಸ್ಥಾನಕ್ಕಾಗಿ ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ. ಪ್ರತ್ಯೇಕ ರಾಜ್ಯವಾದರೂ ನಾವು ಕನ್ನಡಿಗರೇ, ಆಂಧ್ರ, ತೆಲಂಗಾಣ ರೀತಿಯಲ್ಲೇ ನಮ್ಮದೂ ಪ್ರತ್ಯೇಕವಾಗಲಿ ಎಂದು ಬಯಸಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.