ಮುಂಬೈ; ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.
ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಮಂಡಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಫಡ್ನವಿಸ್, ಶಿವಸೇನೆಯ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಸಂಜೆ 7:30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಘೋಷಿಸಿದರು.
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ ಸರ್ಕಾರದ ವಿರುದ್ಧ ಬಂಡಾಯವೆದ್ದು, ಶಾಸಕರೊಂದಿಗೆ ಗುವಾಹಟಿಗೆ ತೆರಳಿದ್ದ ಏಕನಾಥ್ ಶಿಂಧೆ ಇಂದು ಮಧ್ಯಾಹ್ನ z ಪ್ಲಸ್ ಭದ್ರತೆಯಲ್ಲಿ ವಿಶೇಷ ವಿಮಾನದಲ್ಲಿ ಮುಂಬೈಗೆ ಆಗಮಿಸಿದ್ದು, ನೇರವಾಗಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾದರು.
49 ಶಾಸಕರ ಸಹಿಯಿರುವ ಪತ್ರದೊಂದಿಗೆ ಆಗಮಿಸಿರುವ ಏಕನಾಥ್ ಶಿಂಧೆ ಫಡ್ನವಿಸ್ ಭೇಟಿಯಾಗಿ ಚರ್ಚೆ ನಡೆಸಿದ್ದು, ಸಂಜೆ ಇಬ್ಬರು ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಶಿಂಧೆ ಸರ್ಕಾರ ರಚನೆ ಹಕ್ಕನ್ನು ಮಂಡಿಸಿದರು.
Laxmi News 24×7