Breaking News

ಬೆಳಗಾವಿ ಆರೋಗ್ಯ ಇಲಾಖೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ರಿಂದ ಮೇಜರ್ ಸರ್ಜರಿ..

Spread the love

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ.ಎ.ವಿ.ಕಿವಡಸನ್ನವರ ಅವರು ನಿರ್ವಹಿಸುತ್ತಿದ್ದ ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್.ತುಕ್ಕಾರ ಅವರಿಗೆ ಹಂಚಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿರುತ್ತಾರೆ.

ಮೂಡಲಗಿಯಲ್ಲಿ ಹಳ್ಳದಲ್ಲಿ ಭ್ರೂಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇವರ ಕಾರ್ಯವೈಖರಿ ಸಮರ್ಪಕವಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ್ದರು. ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಡಾ.ಕಿವಡಸನ್ನವರ ಅವರು ಸಮರ್ಪಕವಾಗಿ ನಿರ್ವಹಿಸಿ ಕಾಲಕಾಲಕ್ಕೆ ಸ್ಕ್ಯಾನಿಂಗ್ ಸೆಂಟರ್ ಹಾಗೂ ಆಸ್ಪತ್ರೆಗಳಿಗೆ ಭೇಟಿ ನೀಡಿದಿರುವುದರಿಂದ ಮೂಡಲಗಿಯಂತಹ ಘಟನೆಗಳು ಸಂಭವಿಸಿರುವುದು ಕಂಡುಬಂದಿರುತ್ತದೆ ಎಂದು ಜಿಲ್ಲಾಧಿಕಾರಿ ವರದಿಯಲ್ಲಿ ತಿಳಿಸಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ