Breaking News

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ.. ಹೈದರಾಬಾದ್​ಗೆ ಸಿಎಂ

Spread the love

ಬೆಂಗಳೂರು: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದಿನಿಂದ ಹೈದರಾಬಾದ್‌ನಲ್ಲಿ ಆರಂಭವಾಗಲಿದ್ದು, ಚುನಾವಣೆ, ಪಕ್ಷ ವಿಸ್ತರಣೆ ಮತ್ತು ಮೋದಿ ಆಡಳಿತವನ್ನು ಜನಸಾಮಾನ್ಯರಿಗೆ ಕೊಂಡೊಯ್ಯುವ ಪ್ರಮುಖ ವಿಷಯಗಳು ಚರ್ಚೆಯಾಗಲಿವೆ.

ಹೈದರಾಬಾದ್​ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.ಎರಡು ದಿನ ಕಾರ್ಯಕಾರಣಿ ಸಭೆಯಲ್ಲಿ ಅವರು ಭಾಗಿಯಾಗಲಿದ್ದು, ಭಾನುವಾರ ಸಂಜೆ ಹೈದರಾಬಾದ್​ನಿಂದ ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಲವು ನಾಯಕರು ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ