Breaking News

ಡಿಸೆಂಬರ್​ನಲ್ಲೇ ವಿಧಾನಸಭೆ ಚುನಾವಣೆ ಸಾಧ್ಯತೆ: ಸಜ್ಜಾಗಿ ಎಂದ H.DK

Spread the love

ಬೆಂಗಳೂರು: ವಿಧಾನಸಭೆ ಚುನಾವಣೆ ಡಿಸೆಂಬರ್​ನಲ್ಲೇ ಎದುರಾಗುವ ಸಾಧ್ಯತೆಗಳಿವೆ. ಜೆಡಿಎಸ್​ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಜೆಡಿಎಸ್​ ರಾಜ್ಯ ಕಚೇರಿ ಜೆಪಿ ಭವನದಲ್ಲಿ ‘ಜನತಾಮಿತ್ರ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕನಿಷ್ಠ ಹದಿನೈದು ಕ್ಷೇತ್ರಗಳನ್ನುಗೆಲ್ಲುವ ವಾತಾವರಣ ಜೆಡಿಎಸ್​ಗೆ ಇದೆ. ವಿಧಾನಸಭೆ ಮತ್ತು ಬಿಬಿಎಂಪಿ ಚುನಾವಣೆಗೆ ಕಾರ್ಯಕರ್ತರು ಸಂಘಟಿತರಾಗಬೇಕು. ಬೆಂಗಳೂರು ಹಂತ-ಹಂತವಾಗಿ ಬೆಳೆಯುತ್ತಿದೆ. ಬೆಂಗಳೂರಿನಲ್ಲಿ ನಮ್ಮ ಪಕ್ಷ ಶಕ್ತಿಯುತವಾಗಿಲ್ಲ ಎಂಬ ಭಾವನೆ ತೆಗೆದುಹಾಕಬೇಕು ಎಂದು ಹೇಳಿದರು.

ರಾಜರಾಜೇಶ್ವರಿ ನಗರದಲ್ಲಿ ಪಕ್ಷದ ಮತಗಳಿವೆ. ಕಾರ್ಯಕರ್ತರು ಇದನ್ನು ಮರೆಯಬಾರದು.‌ ನಾವೇನು ಅಧಿಕಾರ ಇದ್ದಾಗ ಅಕ್ರಮವಾಗಿ ಹಣ ಲೂಟಿ ಮಾಡಿಲ್ಲ. ನಮ್ಮಲ್ಲಿ ಮೂರು ಜನ ಶಾಸಕರು ಪಕ್ಷದಲ್ಲಿದ್ದರು. ಅವರೂ ಬೇರೆ ಕಡೆ ಹೋಗಿದ್ದಾರೆ. ಚಾಮರಾಜಪೇಟೆಯಲ್ಲಿ ನಮ್ಮ ನಾಯಕರು ಹೋರಾಟ ಮಾಡಿದರು. ಅದರಿಂದಾಗಿ ಚಾಮರಾಜಪೇಟೆ, ಪುಲಕೇಶಿನಗರ, ಮಹಾಲಕ್ಷ್ಮಿ ಲೇಔಟ್​ನಲ್ಲೂ ಗೆದ್ದೆವು. ಪಕ್ಷ ಉಳಿದರೆ ನಾವೆಲ್ಲ ಉಳಿಯುತ್ತೇವೆ ಎಂದರು.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ