Breaking News

ಬೆಳಗಾವಿ | ಮುನ್ನೆಚ್ಚರಿಕೆ ಇಲ್ಲದೆ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ: ಆಯೋಜಕರ ವಿರುದ್ಧ ಪ್ರಕರಣ ದಾಖಲು

Spread the love

ಬೆಳಗಾವಿ, ಜು.1: ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೆ ಜೂ.29ರಂದು ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ ನಡೆದಿದ್ದು, ಇದರ ವಿಡಿಯೋಗಳು ಜು.1ರಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.

ಈ ಹಿನ್ನೆಲೆಯಲ್ಲಿ ಆಯೋಜಕರ ವಿರುದ್ಧ ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಚಮಕೇರಿ ಗ್ರಾಮದ ರಸ್ತೆಯಲ್ಲಿ ಬೀರಲಿಂಗೇಶ್ವರ ಜಾತ್ರೆ ಪ್ರಯುಕ್ತ ಬುಧವಾರ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅಪಾಯವನ್ನೂ ಲೆಕ್ಕಿಸದೆ ಸ್ಪರ್ಧಾಳುಗಳು ಭಾಗವಹಿಸಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಪೆÇಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾರ್ವಜನಿಕ ವಲಯದಲ್ಲಿ ಅಪಾಯಕಾರಿಯಾಗಿ ಟ್ರ್ಯಾಕ್ಟರ್ ಸ್ಪರ್ಧೆ ಆಯೋಜಿಸಿದ ಆರೋಪದಡಿ ಆಯೋಜಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ