Breaking News

ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ :

Spread the love

ಬೆಂಗಳೂರು: ಮುಂಗಾರು ಮಳೆ ಆರಂಭಟ ರಾಜ್ಯಾಧ್ಯಂತ ಜೋರಾಗಿದೆ. ಕರಾವಳಿ ಭಾಗದ ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ) ಜನ ಜೀವನವೇ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ರಾಜ್ಯಾಧ್ಯಂತ ಜುಲೈ.5ರವರೆಗೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಇಂದಿನಿಂದ ಜುಲೈ 5 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಇಂದೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಕರಾವಳಿ ಭಾಗದಲ್ಲೂ ಭಾರೀ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ