Breaking News

ಆ ದುಷ್ಟ ಶಿಕ್ಷಕನಿಗೆ ಜೀವಮಾನದಲ್ಲೇ ಅವನು ಜೈಲಿನಿಂದ ಹೊರಗೆ ಬರದಂತೆ ಕಠಿಣ ಕಾನೂನು ಕ್ರಮ ಜರುಗಿಸಬೇಕು : ಶಿವರಾಜ ತಂಗಡಗಿ

Spread the love

ಕೊಪ್ಪಳ: ನೆರೆಮನೆಯ ಮಹಿಳೆಯರು ಮತ್ತು ಮಕ್ಕಳ ಜೊತೆಗೆ ಶಿಕ್ಷಕ ಕಾಮದಾಟವಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿಶಿಕ್ಷಕನ ವಿರುದ್ಧ ಎಫ್‌ಐಆರ್ದಾಖಲಾಗಿದೆ. ಈ ಬಗ್ಗೆ ಮಾಜಿ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದು, ಆತನಿಗೆ ಸಾಮಾನ್ಯ ಶಿಕ್ಷೆ ಆಗಬಾರದು. ಆತನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಹೇಳಿದ್ದಾರೆ.

ನನ್ನ ಕ್ಷೇತ್ರದಲ್ಲಿ ಇಂತಹ ಒಬ್ಬ ದುಷ್ಟ ಶಿಕ್ಷಕನಿದ್ದಾನೆ ಎನ್ನುವುದೇ ಖೇದಕರ ಸಂಗತಿಯಾಗಿದೆ. ಒಬ್ಬ ಶಿಕ್ಷಕನಾಗಿ ಆ ವ್ಯಕ್ತಿ ಅಂತಹ ಕೃತ್ಯದಲ್ಲಿ ತೊಡಗಿದ್ದು ಖಂಡನೀಯ. ಯಾರು ದೂರು ನೀಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಅವನನ್ನು ಬಂಧಿಸಬೇಕು. ಆತನಿಗೆ ಶಿಕ್ಷೆಯಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶಿವರಾಜ ತಂಗಡಗಿ ಅವರು ಹೇಳಿದ್ದಾರೆ.

ಶಿಕ್ಷಕನಿಗೆ ಜೀವಮಾನ ಜೈಲಿನಲ್ಲಿರುವಂತೆ ಮಾಡಬೇಕುಈ ಪ್ರಕರಣದಿಂದಾಗಿ ಮಕ್ಕಳನ್ನು ಶಾಲೆಗೆ ಕಳಿಸಲು ಪಾಲಕರು ಚಿಂತಿಸುವಂತಾಗಿದೆ. ಇಂತಹ ಪ್ರಕರಣದಿಂದಾಗಿ ಒಳ್ಳೆಯ ಶಿಕ್ಷಕರ ಮೇಲೂ ಅನುಮಾನ ಮೂಡುವಂತೆ ಮಾಡಿದೆ. ಜೀವಮಾನದಲ್ಲೇ ಅವನು ಜೈಲಿನಿಂದ ಹೊರಗೆ ಬರದಂತೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ತುಮಕೂರು: ಮುಂಬೈ ಮಾದರಿ ಗಣಪತಿ ವಿಗ್ರಹಗಳಿಗೆ ಹೆಚ್ಚು ಬೇಡಿಕೆ

Spread the loveತುಮಕೂರು: 2025ರ ಚೌತಿ ಬಂದೇ ಬಿಡ್ತು. ಭಕ್ತರು ವಿಭಿನ್ನ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಮುಂಬೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ