Breaking News

ಕನ್ಹಯ್ಯಲಾಲ್ ಹಂತಕರಿಗೆ ಕಠಿಣ ಶಿಕ್ಷೆಯಾಗಲಿ: ಶ್ರೀಶೈಲಶ್ರೀ

Spread the love

ವಿಜಯಪುರ: ಉದಯಪುರದಲ್ಲಿ ಕನ್ಹಯ್ಯಲಾಲ್ ಹತ್ಯೆ ಅಮಾನವೀಯ ಕೃತ್ಯ ಖಂಡನಾರ್ಹ. ಪ್ರಜಾ ಪ್ರಭುತ್ವದ ಈ ದೇಶದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಅಭಿಪ್ರಾಯ ಬೇಧವಿದ್ದಲ್ಲಿ ಸಮರ್ಥ ಅಭಿಪ್ರಾಯದ ಮೂಲಕವೇ ವಿರೋಧಿಸಿ, ಗೆಲ್ಲಬೇಕು.

ಆದರೆ ಜೀವ ಘಾತುಕ ಹತ್ಯೆ ಮೂಲಕ ಅಲ್ಲ ಎಂದು ಶ್ರೀಶೈಲ ಸೂರ್ಯಸಿಂಹಾಸನ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಶ್ರೀಗಳು ಅಭಿಪ್ರಾಯಪಟ್ಟರು.

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಹಿಂಸೆಯನ್ನು ಪ್ರತಿಪಾದಿಸುವ ಇಂಥವರಿಗೆ ಕಠಿಣ ಶಿಕ್ಷೆಯಾಗಬೇಕು. ಹೇಯವಾದ ಈ ಕೃತ್ಯದಲ್ಲಿ ಭಾಗಿಯಾದ ಹಾಗೂ ಇಂಥ ಕೃತ್ಯಗಳಿಗೆ ಪ್ರಚೋದನೆ ನೀಡುವವರಿಗೂ ಭವಿಷ್ಯದಲ್ಲಿ ಇಂಥ ಘಟನೆಗಳು ಸಂಭವಿಸದಂತೆ ಎಚ್ಚರಿಕೆಯ ಪಾಠವಾಗುವಂತೆ ಕೃತ್ಯದಲ್ಲಿ ಭಾಗಿಯಾದ ಹಾಗೂ ಪ್ರಚೋದಿಸಿದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ