Breaking News

ಬೇಗನೇ ಬೀದಿ ನಾಯಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು.: ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ

Spread the love

ಬೆಳಗಾವಿಯ ರಾಮತೀರ್ಥ ನಗರ ಸೇರಿದಂತೆ ಮುಂತಾದ ಕಡೆ ಹೆಚ್ಚಾಗಿರುವ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ನಗರಸೇವಕ ಹಣಮಂತ ಕೊಂಗಾಲಿ ಮನವಿ ಮಾಡಿಕೊಂಡಿದ್ದಾರೆ.

ಹೌದು ರಾಮತೀರ್ಥ ನಗರ, ಶಿವಬಸವ ನಗರ, ಶ್ರೀನಗರ ಮಹಾಂತೇಶ ನಗರ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಮಿತಿ ಮೀರಿದೆ. ಆದಷ್ಟು ಬೇಗನೇ ಬೀದಿ ನಾಯಿಗಳ ಸಮಸ್ಯೆಗಳನ್ನು ಬಗೆಹರಿಸಬೇಕು.

ಸಂತಾನ ಹರಣ ಚಿಕಿತ್ಸೆ ಮತ್ತು ಸಾಕಾಣಿಕೆ ಕೇಂದ್ರಗಳನ್ನು ಪಾಲಿಕೆ ಅಡಿಯಲ್ಲಿ ಸ್ಥಾಪಿಸಿ ನಗರದಲ್ಲಿ ನಾಯಿಗಳ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಸೋಮವಾರ ಮಹಾನಗರ ಪಾಲಿಕೆಯಲ್ಲಿ ಆಯುಕ್ತ ಡಾ.ರುದ್ರೇಶ ಘಾಳಿ ಅವರನ್ನು ಭೇಟಿಯಾಗಿ ನಗರಸೇವಕ ಹಣಮಂತ ಕೊಂಗಾಲಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮೋಹನ್ ಹೂಗಾರ್, ಮಹಾದೇವ ರಾಥೋಡ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ