Breaking News

ಮಹಾನಗರ ಪಾಲಿಕೆಗೆ ಮೇಯರ್‌, ಉಪ ಮೇಯರ್‌ ಚುನಾವಣೆಗೆ ನ್ಯಾಯಾಲಯದಲ್ಲಿ ತಡೆ

Spread the love

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ನೂತನ ಸದಸ್ಯರ ಪರಿಚಯಾತ್ಮಕ ಕಾರ್ಯಕ್ರಮವು, ಸಮಸ್ಯೆಗಳನ್ನು ಹೇಳಿಕೊಳ್ಳುವ ಸಭೆಯಾಗಿ ಮಾರ್ಪಟ್ಟಿತು.

ಮಹಾನಗರ ಪಾಲಿಕೆಗೆ ಸದಸ್ಯರು ಆಯ್ಕೆಗೊಂಡು 10 ತಿಂಗಳಾಗಿದೆ.

ಆದರೆ, ಮೇಯರ್‌, ಉಪ ಮೇಯರ್‌ ಚುನಾವಣೆಗೆ ನ್ಯಾಯಾಲಯದಲ್ಲಿ ತಡೆಬಿದ್ದಿದೆ. ಹೀಗಾಗಿ, ಇದೂವರೆಗೂ ಪಾಲಿಕೆ ಸದಸ್ಯರು ಪ್ರಮಾನ ವಚನ ಸ್ವೀಕರಿಸಿಲ್ಲ. ಹೀಗಾಗಿ, ತವು ಜನರಿಂದ ಆಯ್ಕೆಯಾಗಿದ್ದರೂ ಅವರ ಸಮಸ್ಯೆಗೆ ಸ್ಪಂದಿಸಲು ಆಗುತ್ತಿಲ್ಲ ಎಂದು ಬಹುಪಾಲು ಸದಸ್ಯರು ಗೋಳು ಹೇಳಿಕೊಂಡರು.

ಕೆಎಂಸಿ ಕಾಯ್ದೆ ಪ್ರಕಾರ ಪ್ರಮಾಣವಚನ ಸ್ವೀಕಾರ ಆಗುವವರೆಗೂ ಪಾಲಿಕೆಯಲ್ಲಿ ಸಭೆಗಳನ್ನು ನಡೆಸುವಂತಿಲ್ಲ. ಅಭಿವೃದ್ಧಿ ಕೆಲಸ ಮಾಡುವಂತಿಲ್ಲ. ಮೇಯರ್, ಉಪಮೇಯರ್ ಆಯ್ಕೆ ಬಳಿಕವೇ ಜನರ ಸಮಸ್ಯೆಗೆ ಸ್ಪಂದಿಸಲು ಸಾಧ್ಯ. ಇದರಿಂದ ತಮ್ಮ ವಾರ್ಡ್‌ಗಳಲ್ಲಿ ಓಡಾಡದ ಸ್ಥಿತಿ ಬಂದಿದೆ ಎಂದೂ ಕೆಲವರು ಹೇಳಿದರು.

ಅಧಿಕಾರ ಸ್ವೀಕರಿಸದ ಕಾರಣ ಸ್ವತಃ ಪಾಲಿಕೆ ಅಧಿಕಾರಿಗಳೇ ನಮ್ಮ ಮಾತುಗಳಿಗೆ ಬೆಲೆ ಕೊಡುತ್ತಿಲ್ಲ. ವಾರ್ಡ್‌ನಲ್ಲಿ ಯಾವ ಕೆಲಸ ನಡೆದಿವೆ ಎಂಬ ಮಾಹಿತಿಯನ್ನೂ ನೀಡುತ್ತಿಲ್ಲ. ಅಧಿಕಾರಿಗಳ ವರ್ತನೆ ಹೀಗಾದರೆ, ಗುತ್ತಿಗೆದಾರರದು ಇನ್ನೊಂದು ವರಸೆ. ಅವರು ಕೆಲಸ ಮಾಡುವ ವಾರ್ಡ್‌ ಯಾರದು ಎಂಬ ಕನಿಷ್ಠ ಸೌಜನ್ಯವೂ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ. ಮೇಲಾಗಿ, ತೆರಿಗೆ ಯಾರು ಸಂಗ್ರಹಿಸುತ್ತಿದ್ದಾರೆ, ಆದಾಯ ಎಷ್ಟು ಬಂದಿದೆ, ಕಾಮಗಾರಿಗೆ ಅನುಮತಿ ಯಾರು ನೀಡುತ್ತಿದ್ದಾರೆ ಎಂಬ ಕನಿಷ್ಠ ಮಾಹಿತಿಯೂ ಸಿಗುತ್ತಿಲ್ಲ ಎಂದು ಕೆಲ ಮಹಿಳಾ ಸದಸ್ಯರು ದೂರಿದರು.

ಪಾಲಿಕೆಯ ಎಲ್ಲ 58 ವಾರ್ಡ್‌ಗಳಲ್ಲೂ ಚರಂಡಿ, ಕುಡಿಯುವ ನೀರು, ರಸ್ತೆ, ಬೀದಿ ದೀಪ, ಸಾರಿಗೆ ಸೇರಿದಂತೆ ವಿವಿಧ ಸಮಸ್ಯೆಗಳು ಇವೆ. ಈಗ ಮಳೆಗಾಲ ಆರಂಭವಾಗಿದ್ದು ಜನರು ದಿನವೂ ಫೋನ್‌ ಮಾಡಿ ಸಮಸ್ಯೆ ಹೇಳುತ್ತಿದ್ದಾರೆ. ಇದನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ ಎಂದೂ ಹೇಳಿಕೊಂಡರು.

ನಂತರ ಮಾತನಾಡಿದ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ‘ಪಾಲಿಕೆಯ ವ್ಯಾಪ್ತಿಯ ಯಾವುದೇ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಂಡರೂ ಸ್ಥಳೀಯ ಸದಸ್ಯರಿಗೆ ಮಾಹಿತಿ ನೀಡಬೇಕು. ವಾರ್ಡ್‌ಗಳ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು. 


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ