ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಚಂದ್ರಶೇಖರ ಗುರೂಜಿ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಗುರೂಜಿ ಆತ್ಮೀಯ ಮೋಹನ ಲಿಂಬಿಕಾಯಿ ಹೇಳಿಕೆ ನೀಡಿದ್ದಾರೆ.
ಹೌದು ದುಷ್ಕರ್ಮಿಗಳಿಂದ ಚಾಕುವಿನಿಂದ ಇರಿದು ಹತ್ಯೆ ಆಗಿರುವ ಚಂದ್ರಶೇಖರ ಗುರೂಜಿ ಅಂತ್ಯ ಸಂಸ್ಕಾರದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮೋಹನ ಲಿಂಬಿಕಾಯಿ ಗೂರೂಜಿಯವರಿಗೆ ಬಹಳಷ್ಟು ಅನುಯಾಯಿಗಳು ಇದ್ದಾರೆ. ದೇಶದ ಬೇರೆ ಬೇರೆ ಕಡೆಗಳಲ್ಲಿ ಇದ್ದಾರೆ.
ಕುಟುಂಬದವರೊಂದಿಗೆ ಚರ್ಚಿಸಿದ್ದೇವೆ. ನಾಳೆ ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ. ಹುಬ್ಬಳ್ಳಿಯ ಸುಳ್ಳ ಗ್ರಾಮದ ರಸ್ತೆಯ ಜಮೀನಿನಲ್ಲಿ ಅಂತ್ಯಕ್ರಿಯೆ. ಗುರೂಜಿಯವರ ಸ್ವಂತ ಜಮೀನಿನಲ್ಲಿಯೇ ಅಂತ್ಯಕ್ರಿಯೆ ಮಾಡಲಾಗುವುದು. ಇನ್ನು ಪೆÇೀಸ್ಟ್ ಮಾರ್ಟಮ್ ಕೂಡ ನಾಳೆ ನಡೆಯೋ ಸಾಧ್ಯತೆ ಎಂದಿದ್ದಾರೆ.