ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರಿ ಮಳೆಯಿಂದಾಗಿ ( Heavy Rain ), ಜನರು ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ಮನೆಯಿಂದ ಹೊರ ಬರದಂತ ಪರಿಸ್ಥಿತಿ ಇದೆ. ಈ ಹಿನ್ನಲೆಯಲ್ಲಿಯೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ ( School Holiday ) ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಶಿವಮೊಗ್ಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದಂತೆ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ, ದಿನಾಂಕ 06-07-2022ರ ನಾಳೆ ರಜೆ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ದಿನಾಂಕ 06-07-2022ರ ಬುಧವಾರದಂದು ಹೊಸನಗರ, ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಪ್ರಾಧಮಿಕ ಹಾಗೂ ಪ್ರೌಢಶಾಲೆಗಳಿಗೆ ( Primary and High School ) ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.