Breaking News

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸದ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

Spread the love

ಬೆಂಗಳೂರು: ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್ ಗಳನ್ನು ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಿದೆಯಂತೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ 40% ಕಮಿಷನ್ ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

 

‘ಒಂದೆಡೆ ರಾಜ್ಯಬಿಜೆಪಿ ಸರ್ಕಾರದ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸೈಕಲ್, ಶೂ, ಸಾಕ್ಸ್ ನೀಡದೆ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

‘ಇಂದಿನ ದಿನದವರೆಗೆ ಶಾಲಾ ಮಕ್ಕಳಿಗೆ ನೀಡಬೇಕಾಗಿದ್ದ ಪಠ್ಯಪುಸ್ತಕಗಳ ಬಗ್ಗೆ ಖಚಿತ ತೀರ್ಮಾನವನ್ನು ಕೈಗೊಳ್ಳಲು ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕೆಲವು ಶಾಲೆಗಳಿಗೆ ಹಳೆಯ ಪಠ್ಯ, ಇನ್ನು ಕೆಲವು ಶಾಲೆಗಳಿಗೆ ಹೊಸ ಪಠ್ಯ, ಉಳಿದ ಶಾಲೆಗಳಿಗೆ ಪಠ್ಯವೇ ಇಲ್ಲದಂತಹ ದುಸ್ಥಿತಿ ಇದೆ. ಕೊರೊನಾ ಕಾಲದ ಕಲಿಕಾ ಅಂತರವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ “ವಿದ್ಯಾಪ್ರವೇಶ” ಮತ್ತು “ಕಲಿಕಾ ಚೇತರಿಕೆ” ಎಂಬ 2 ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಇದಕ್ಕೆ ಸಂಬಂಧಿಸಿದ ಕಲಿಕಾ ಹಾಳೆಗಳನ್ನು ಪೂರೈಸಲು ಬಿಜೆಪಿ ಸರ್ಕಾರದಲ್ಲಿ ದುಡ್ಡಿಲ್ಲ’ವೆಂದು ಸಿದ್ದರಾಮಯ್ಯ ಕುಟುಕಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ