ಬಾಗಲಕೋಟೆ, ಜುಲೈ 6: ನೂಪುರ್ ಶರ್ಮಾ ವಿರುದ್ಧ ಪೋಸ್ಟ್ ವಿಚಾರವಾಗಿ ಎರಡು ಕೋಮು ಗುಂಪುಗಳ ಮಧ್ಯೆ ಭೀಕರ ಗಲಾಟೆ ನಡೆದು ಮೂವರು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿಯಾಗಿದೆ, ಓರ್ವನ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ.
ಕೆರುರೂ ಪಟ್ಟಣದಲ್ಲಿ ಬುಧವಾರ ಸಾಯಂಕಾಲ ಸಮಯ ಈ ಘಟನೆ ನಡೆದಿದ್ದು, ಇದರಿಂದ ಇಡೀ ಪಟ್ಟಣ ಉದ್ವಿಗ್ನಗೊಂಡಿದೆ. ಘಟನೆಯಲ್ಲಿ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಕಾರ್ಯದರ್ಶಿ ಅರುಣ್ ಕಟ್ಟಿಮನಿಗೆ ಗಂಭೀರ ಗಾಯವಾಗಿದ್ದಾರೆ. ಆತನ ಸಹೋದರ ಲಕ್ಷ್ಮಣ್ ಕಟ್ಟಿಮನಿ ಹಾಗೂ ಯಮನೂರ್ ಚುಂಗಿನ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ.