Breaking News

ಸಾರ್ವಜನಿಕರೇ ಗಮನಿಸಿ..! ಇಂದಿನಿಂದ ರಾಜ್ಯಾಧ್ಯಂತ ‘ಗುತ್ತಿಗೆ ನೌಕರ’ರ ಪ್ರತಿಭಟನೆ: ‘ಸರ್ಕಾರಿ ಆಸ್ಪತ್ರೆ’ಯ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ

Spread the love

ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಸುವಂತ ಆಗ್ರಹಿಸಿ ಆರೋಗ್ಯ ಇಲಾಖೆಯ ( Health Department ) ಗುತ್ತಿಗೆ, ಹೊರಗುತ್ತಿಗೆ ನೌಕರರು ಇಂದು ಬೆಂಗಳೂರು ಚಲೋ ( Bengaluru Cholo ) ನಡೆಸೋ ಮೂಲಕ ಪ್ರತಿಭಟನೆಗೆ ಇಳಿಯಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದಿನಿಂದ ಸರ್ಕಾರಿ ಆಸ್ಪತ್ರೆಗಳ ( Government Hospital ) ಆರೋಗ್ಯ ಸೇವೆಯಲ್ಲಿ ( Health Service ) ವ್ಯತ್ಯಯ ಉಂಟಾಗಲಿದೆ.

 

ಹೌದು.. ರಾಜ್ಯ ಸರ್ಕಾರ ಈವರೆಗೆ ಆರೋಗ್ಯ ಇಲಾಖೆಯ ( Karnataka Health Department ) ಗುತ್ತಿಗೆ, ಹೊರಗುತ್ತಿಗೆ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಿಲ್ಲ. ಮೌಲ್ಯಮಾಪನದಂತ ಪದ್ಧತಿಯನ್ನು ರದ್ದುಗೊಳಿಸಬೇಕು. ಶ್ರೀನಿವಾಸಾಚಾರಿ ವರದಿಯನ್ನು ಸರ್ಕಾರ ಜಾರಿಗೊಳಿಸಬೇಕು ಎಂಬುದಾಗಿ ಒತ್ತಾಯಿಸಿ ಇಂದು ಬೆಂಗಳೂರು ಚಲೋ ( Bengaluru Chalo ) ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರೆಲ್ಲರೂ ಭಾಗವಹಿಸುವಂತೆ ರಾಜ್ಯಾಧ್ಯಕ್ಷ ವಿಶ್ವರಾಧ್ಯ ಯಾಮೋಜಿ ಹೇಳಿದ್ದಾರೆ.

ಈ ಬಗ್ಗೆ ನಮ್ಮ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿ ಮಾಹಿತಿ ನೀಡಿದಂತ ಅವರು, ಮೂರು ತಿಂಗಳ ಮೌಲ್ಯಮಾಪವನ್ನು ರಾಜ್ಯ ಸರ್ಕಾರ ಒಂದು ವರ್ಷಕ್ಕೆ ನಿಗದಿ ಪಡಿಸಲಾಗಿದೆ. ನಮ್ಮ ಎಲ್ಲಾ ಬೇಡಿಕೆಗಳ ಸಂಬಂಧ ಮಾನ್ಯ ಆರೋಗ್ಯ ಸಚಿವರೊಂದಿಗೆ ಸಂಪೂರ್ಣ ಚರ್ಚೆ ನಡೆಸಲಾಗಿದೆ. ಆ ಎಲ್ಲಾ ಬೇಡಿಕೆಗಳನ್ನು ಈಡೇರಿಸಿ, ಸರ್ಕಾರ ಆದೇಶ ಹೊರಡಿಸಬೇಕು ಎಂದರು.

ಇಂದು ರಾಜ್ಯದ ಎಲ್ಲಾ ಜಿಲ್ಲೆಗಳ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ಬೆಂಗಳೂರು ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ನಗರ ಫ್ರೀಡಂ ಪಾರ್ಕ್ ನಲ್ಲಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪೊಲೀಸ್ ಇಲಾಖೆಯಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗಿದೆ. ಜಿಲ್ಲಾ, ತಾಲೂಕು, ಗ್ರಾಮೀಣ ಭಾಗದಿಂದಲೂ ಗುತ್ತಿಗೆ, ಹೊರಗುತ್ತಿಗೆಯ ಸಾವಿರಾರು ನೌಕರರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ಬೇಡಿಕೆ ಈಡೇರಿಸೋವರೆಗೆ ಪ್ರತಿಭಟನೆ ಮುಂದುವರೆಯಲಿದೆ. ರಾಜ್ಯ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ