Breaking News

ಚಂದ್ರಶೇಖರ ಗುರೂಜಿ ಹತ್ಯೆಯ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಹೋಟೆಲ್‌ಗಳು ಹಾಗೂ ರೆಸಾರ್ಟ್​ಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಗೃಹ ಸಚಿವರ ಸೂಚನೆ

Spread the love

ಬೆಳಗಾವಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆಯ ಹಿನ್ನೆಲೆಯಲ್ಲಿ‌ ರಾಜ್ಯದ ಎಲ್ಲ ಪ್ರತಿಷ್ಠಿತ ಹೋಟೆಲ್​ಗಳು ಹಾಗೂ ಪಂಚತಾರಾ ರೆಸಾರ್ಟ್​ಗಳಲ್ಲಿ ಭದ್ರತಾ ಪರಿಶೀಲನೆ ನಡೆಸಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶಿಸಿದ್ದಾರೆ. ಬೆಳಗಾವಿಯಲ್ಲಿ ‌ಮಾತನಾಡಿದ ಸಚಿವರು, ಹೋಟೆಲ್​ಗಳು ಹಾಗೂ ರೆಸಾರ್ಟ್​ಗಳು ಪರವಾನಗಿ ಪಡೆಯುವ ಪೂರ್ವದಲ್ಲಿ ವಿಧಿಸಲಾದ ರಕ್ಷಣಾ ಸಂಬಂಧಿತ ನಿಯಮಾವಳಿಗಳನ್ನು ಪಾಲಿಸುತ್ತಿವೆಯೇ? ಎಂಬುದರ ಬಗ್ಗೆ ಪರಿಶೀಲನೆ ಆಗಬೇಕಿದೆ.

ಯಾವುದಾದರೂ ಹೋಟೆಲ್​ ಅಥವಾ ಪ್ರತಿಷ್ಠಿತ ರೆಸಾರ್ಟ್ ರಕ್ಷಣೆಯ ಸಂಬಂಧ ನಿಯಮಗಳನ್ನು ಪಾಲಿಸಲು ವಿಫಲವಾಗಿದ್ದರೆ ಅಗತ್ಯ ಕಾನೂನು ಕ್ರಮ ಜರುಗಿಸುವಂತೆ ನಿರ್ದೇಶಿಸಲಾಗಿದೆ. ಹೋಟೆಲ್ ವ್ಯವಸ್ಥಾಪಕರು ತಮ್ಮ ಅತಿಥಿಗಳಿಗೆ ಸರಿಯಾದ ರಕ್ಷಣಾ ವ್ಯವಸ್ಥೆ ಒದಗಿಸದೇ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಸಚಿವರು ಹೇಳಿದರು.


Spread the love

About Laxminews 24x7

Check Also

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

Spread the love ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ