Breaking News

ಬೆಳಗಾವಿಯಲ್ಲಿ ಮಳೆ ಅಬ್ಬರ ಜೋರಾಗಿ ಮನೆಯಗೋಡೆ ಕುಸಿದಿದೆ.

Spread the love

ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ನಿರಂತರವಾಗಿ ಮಳೆ ಆಗುತ್ತಿರುವ ಹಿನ್ನೆಲೆ ನಗರದಲ್ಲಿ ಮನೆಯ ಮಣ್ಣಿನ ಗೋಡೆಯೊಂದು ಕುಸಿದಿರುವ ಘಟನೆ ನಡೆದಿದೆ.

ಹೌದು ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಇದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಕೆಲ ಮನೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೀಗೆ ಮಳೆ ನೀರಿನಿಂದ ನೆನೆದು ವಡಗಾವಿಯ ವಡ್ಡರಛಾವನಿಯ ಭಾರತ ನಗರದಲ್ಲಿ ಮಣ್ಣಿನ ಗೋಡೆಯೊಂದು ಕುಸಿದಿದೆ

ಸರಸ್ವತಿ ಢವಳಿ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು. ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿ ಗಾಯವಾಗಿಲ್ಲ. ಸ್ಥಳಕ್ಕೆ ನಗರಸೇವಕ ರವಿ ಸಾಳುಂಕೆ, ಶಾಹಪುರ ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮನೆ ಕಳೆದುಕೊಂಡಿರುವ ಕುಟುಂಬಕ್ಕೆ ಧೈರ್ಯ ತುಂಬಿದ್ದು, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.


Spread the love

About Laxminews 24x7

Check Also

ಸೌರ ಘಟಕಕ್ಕಾಗಿ ಮರ ಕಟಾವಿಗೆ ಆಕ್ರೋಶ

Spread the loveಬೆಳಗಾವಿ: ತಾಲೂಕಿನ ಬಡಾಲ ಅಂಕಲಗಿ ಗ್ರಾಮದ ಕೌರಿಗುಡ್ಡದಲ್ಲಿ ಸೌರ ವಿದ್ಯುತ ಘಟಕಕ್ಕಾಗಿ ಶ್ರೀಗಂಧ ಸಹಿತ ವಿವಿಧ ಮರಗಳನ್ನು ಅನಧಿಕೃತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ