Breaking News

ಕೊರೊನಾ ವರದಿ ವಿಳಂಬ, ಚಿಕಿತ್ಸೆ ನಿರ್ಲಕ್ಷದ ಬಗ್ಗೆ ಕಿಡಿ:ವಿಡಿಯೋ ಮಾಡಿ ಅಳಲು

Spread the love

ಚಿತ್ರದುರ್ಗ: ಇಷ್ಟು ದಿನ ಜನ ಸಾಮಾನ್ಯರು ಕೋವಿಡ್ ಕೇಂದ್ರಗಳಲ್ಲಿ ಹಾಗೂ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ, ವ್ಯವಸ್ಥೆ ಸರಿ ಎಲ್ಲ ಎಂದು ವಿಡಿಯೋ ಹರಿಬಿಟ್ಟು ಅಳಲು ತೋಡಿಕೊಂಡಿರುವುದನ್ನು ನೋಡಿದ್ದೇವೆ. ಆದರೆ ಇದೀಗ ಕೊರೊನಾ ವಾರಿಯರ್ಸ್‍ಗೂ ಇದೇ ರೀತಿ ಸಮಸ್ಯೆಯಾಗುತ್ತಿದ್ದು, ಇದೀಗ ಜೀವ ಉಳಿಸುವ ಕೆಲಸ ಮಾಡುವರಿಗೇ ಜೀವ ಭಯ ಶುರುವಾಗಿದೆ.

ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಹಿರೇಗುಂಟನೂರು ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ವಿಡಿಯೋ ಮಾಡಿ ಅವ್ಯವಸ್ಥೆ ಕುರಿತು ಅಳಲು ತೋಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ರೋಗಿಗಳ ಬಗ್ಗೆ ನಿರ್ಲಕ್ಷ ವಹಿಸುತ್ತಿದ್ದು, ಚಿಕಿತ್ಸೆ ಹಾಗೂ ವಾರ್ಡ್‍ಗಳಲ್ಲಿ ಯಾವುದೇ ರೀತಿಯ ವ್ಯವಸ್ಥೆಗಳು ಆಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೇವಲ ಜನ ಸಾಮಾನ್ಯರಿಗೆ ಮಾತ್ರವಲ್ಲ ನಮ್ಮಂಥ ಕೊರೊನಾ ವಾರಿಯರ್ಸ್‍ಗೂ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ತೀರ್ವ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಕೊರೊನಾ ಟೆಸ್ಟ್ ವರದಿ ವಿಳಂಬ, ಚಿಕಿತ್ಸೆಯಲ್ಲಿಯೂ ನಿರ್ಲಕ್ಷದ ವಹಿಸುತ್ತಿರುವ ಬಗ್ಗೆ ಕಿಡಿ ಕಾರಿದ್ದಾರೆ. ಅಲ್ಲದೆ ಕೋವಿಡ್ ವಾರ್ಡ್ ಅವ್ಯವಸ್ಥೆ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸೋಂಕಿತ ಆರೋಗ್ಯ ಇಲಾಖೆ ಸಿಬ್ಬಂದಿಗಾಗಿ ಪ್ರತ್ಯೇಕ ವ್ಯವಸ್ಥೆಗೆ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ


Spread the love

About Laxminews 24x7

Check Also

 ವಸ್ತುಪ್ರದರ್ಶನ ಮೈದಾನದಲ್ಲಿ ದಸರಾದಲ್ಲಿ  ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ (Girl) ಶವ ಪತ್ತೆಯಾಗಿದೆ.

Spread the loveಮೈಸೂರು, (ಅಕ್ಟೋಬರ್ 09): ವಸ್ತುಪ್ರದರ್ಶನ ಮೈದಾನದಲ್ಲಿ ದಸರಾದಲ್ಲಿ (Mysuru Dasara 2025) ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ (Girl) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ