ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಬೆಳಗಾವಿ-ಬಾಗಲಕೋಟ ರಸ್ತೆಯ ಹಲಕಿ ಕ್ರಾಸ್ ಬಳಿ ನಡೆದಿದೆ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಬೆಳಗಾವಿಯಿಂದ ಬಾಗಲಕೋಟೆಯತ್ತ ಹಾಗೂ ಯರಗಟ್ಟಿಯಿಂದ ಬೆಳಗಾವಿಯತ್ತ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗಳ ಮಧ್ಯೆ ಅಪಘಾತ ಅಪಘತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ.ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.