Breaking News

ಮನೆ ಹಾನಿಗೆ ₹ 5 ಲಕ್ಷ ಪರಿಹಾರ: ಅಶೋಕ

Spread the love

ಮಂಗಳೂರು: ‘ಮಳೆಯಿಂದ ಪೂರ್ತಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ₹ 5 ಲಕ್ಷ ಪರಿಹಾರ ನೀಡಲಾಗುವುದು. ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಜತೆ ಚರ್ಚಿಸಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.

ಉಳ್ಳಾಲ ತಾಲ್ಲೂಕಿನ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿಗೆ ಹೋದ ಕೂಡಲೇ ಶೇ 50ರಷ್ಟು ಪರಿಹಾರ ಮೊತ್ತ ಬಿಡುಗಡೆಗೆ ಆದೇಶ ನೀಡುತ್ತೇನೆ.

ಕಡಿಮೆ ಪ್ರಮಾಣದ ಹಾನಿ ಆಗಿರುವವರಿಗೆ ಹಾನಿಯ ಪ್ರಮಾಣದ ಆಧಾರದಲ್ಲಿ ₹50 ಸಾವಿರ ಹಾಗೂ ₹10 ಸಾವಿರ ನೀಡಲು ಅವಕಾಶವಿದೆ. ಈ ಮೊತ್ತವನ್ನು ಒಂದೇ ಕಂತಿನಲ್ಲಿ ಕೊಡಲಾಗುವುದು. ಮನೆಗೆ ನೀರು ನುಗ್ಗಿ ಹಾನಿಯಾದರೆ ₹ 10 ಸಾವಿರ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದ್ದು, ಮನೆ, ಕೃಷಿ, ಜಾನುವಾರು ಹಾನಿಯಾದರೆ ವಿಳಂಬ ಇಲ್ಲದೆ ಪರಿಹಾರ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

ಕಡಲ್ಕೊರೆತ ತಡೆಗೆ ತಜ್ಞರ ತಂಡ ನೇಮಿಸಿ, ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದರು.

ಬಂಟ್ವಾಳ ತಾಲ್ಲೂಕು ಪಂಜಿಕಲ್ಲಿನಲ್ಲಿ ಭೂ ಕುಸಿತದಿಂದ ಮೃತಪಟ್ಟಿರುವ ಮೂವರು ಕಾರ್ಮಿಕರ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು. ಕೇರಳದಿಂದ ಬಂದಿರುವ ಈ ಕಾರ್ಮಿಕರ ಮೃತದೇಹವನ್ನು ಅವರ ತವರಿಗೆ ಕಳುಹಿಸಲು ಮುತುವರ್ಜಿ ವಹಿಸಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ