Breaking News

ಖಾಸಗಿ ಬಸ್​ ಪಲ್ಟಿಯಾಗಿ ಹತ್ತು ಜನರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

Spread the love

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಘಟನೆಯಲ್ಲಿ 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಬ್ಯಾಡಗಿ ತಾಲೂಕು ಸರಕಾರಿ ಆಸ್ಪತ್ರೆ ಮತ್ತು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.

ಬಸ್‌ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು. ಬೆಂಗಳೂರಿನಿಂದ ಮುಂಬೈನತ್ತ ತೆರಳುತ್ತಿದ್ದಾಗ ಚಾಲಕನ‌ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ‌ ಪಲ್ಟಿಯಾಗಿದೆ. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆಂಬ್ಯುಲೆನ್ಸ್​ ವ್ಯವಸ್ಥೆ ಮಾಡಿದ್ದಾರೆ. ಗಾಯಾಳುಗಳನ್ನು ಪೊಲೀಸ್ ವಾಹನ ಹಾಗೂ ಆಂಬ್ಯುಲೆನ್ಸ್​ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

Spread the loveಮೈಸೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ