Breaking News

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಅನುಮೋದನೆ: C.M.ಬೊಮ್ಮಾಯಿ

Spread the love

ಬೆಂಗಳೂರು: ‘ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಸರ್ಕಾರ ಈಗಾಗಲೇ ಸಮವಸ್ತ್ರ ವಿತರಿಸಲು ಅನುಮೋದನೆ ನೀಡಿದೆ.

ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಬೇಕಾಗುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ’ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ಭಿಕ್ಷೆ ಬೇಡಿರುವ ಹಣ ಎಲ್ಲಿ?
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,’ಈ ಹಿಂದೆ ಕೋವಿಡ್ ಸಮಯದಲ್ಲಿ ಭಿಕ್ಷೆ ಬೇಡಿ ಜನರಿಗೆ ಕೊಡುತ್ತೇವೆ ಎಂದು ಅವರು ಹೇಳಿದ್ದರು‌. ಆ ಹಣ ಎಲ್ಲಿ? ಎಂದಿನಂತೆಯೇ ಇದು ಕೂಡ’ ಎಂದು ತಿಳಿಸಿದರು.

ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್‌ ವಿತರಿಸಲು ಸರ್ಕಾರದ ಬಳಿ ಹಣ ಇಲ್ಲದಿದ್ದರೆ ಬಹಿರಂಗವಾಗಿ ಹೇಳಲಿ. ರಾಜ್ಯದ ಜನರ ಬಳಿ ಭಿಕ್ಷೆ ಬೇಡಿ ಮಕ್ಕಳಿಗೆ ಶೂ, ಸಾಕ್ಸ್‌ ಕೊಡಿಸುವೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ