Breaking News

ಹಿಗ್ಗಿದ ಕೃಷ್ಣೆಯ ಒಡಲು: ಮತ್ತೆ ನೆರೆ ಭೀತಿ

Spread the love

ಬೆಳಗಾವಿ: ಜಿಲ್ಲೆಯ ಗಡಿ ಭಾಗ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ನದಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಘಟಪ್ರಭಾ ನದಿಗೆ 10 ಸಾವಿರಕ್ಕೂ ಅಧಿಕ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ.

ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯವಾಗಿರುವ ಹಿಡಕಲ್‌ ಜಲಾಶಯಮಟ್ಟದಲ್ಲಿ ಒಂದೇ ದಿನ ಮೂರು ಅಡಿಗಳಷ್ಟು ಏರಿಕೆಯಾಗಿದೆ. ಒಟ್ಟು 2175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2093 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದಿಂದ 1097 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಖಾನಾಪುರ ತಾಲೂಕಿನ ಕಣಕುಂಬಿ ಮತ್ತು ಜಾಂಬೋಟಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ನದಿ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಲಪ್ರಭಾ ಜಲಾಶಯಕ್ಕೆ 7729 ಕ್ಯೂಸೆಕ್‌ ನೀರು ಬರುತ್ತಿದ್ದು ಜಲಾಶಯಮಟ್ಟದಲ್ಲಿ ಒಂದು ಅಡಿಯಷ್ಟು ಏರಿಕೆಯಾಗಿದೆ. ಒಟ್ಟು 2079.50 ಅಡಿ ಸಾಮರ್ಥ್ಯದ ಮಲಪ್ರಭಾ ಜಲಾಶಯದಲ್ಲಿ ಈಗ 2054.50 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 7729 ಕ್ಯೂಸೆಕ್‌ ನೀರು ಬರುತ್ತಿದ್ದು ಜಲಾಶಯದಿಂದ 194 ಕ್ಯೂಸೆಕ್‌ ನೀರನ್ನು ಬಿಡಲಾಗುತ್ತಿದೆ.

ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳು ಒಡಲುಕ್ಕಿ ಹರಿಯುತ್ತಿವೆ.

ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ನಾಲ್ಕು ಸೇತುವೆಗಳು ಗುರುವಾರ ಜಲಾವೃತಗೊಂಡಿವೆ. ದೂಧಗಂಗಾ ನದಿಗೆ ಅಡ್ಡಲಾಗಿರುವ ನಿಪ್ಪಾಣಿ ತಾಲೂಕಿನ ಕಾರದಗಾ-ಭೋಜ, ಚಿಕ್ಕೋಡಿ ತಾಲೂಕಿನ ಮಲಿಕವಾಡ-ದತ್ತವಾಡ, ವೇದಗಂಗಾ ನದಿಯ ನಿಪ್ಪಾಣಿ ತಾಲೂಕಿನ ಭೋಜವಾಡಿ-ಕುನ್ನೂರ, ಬಾರವಾಡ-ಕುನ್ನೂರ ಸೇತುವೆಗಳು ಜಲಾವೃತಗೊಂಡು ಸಂಚಾರ ಬಂದ್‌ ಆಗಿದೆ. ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದ ಕೋಯ್ನಾ, ಮಹಾಬಲೇಶ್ವರ, ನವಜಾ, ಕಾಳಮ್ಮವಾಡಿ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ಇದರಿಂದ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರಲಾರಂಭಿಸಿದೆ.

ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ 51 ಸಾವಿರ ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ದೂಧಗಂಗಾ ನದಿಯಿಂದ 14 ಸಾವಿರ ಕ್ಯೂಸೆಕ್‌ ಸೇರಿ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಒಟ್ಟು 65 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ ಎಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಮಾಹಿತಿ ನೀಡಿದ್ದಾರೆ.

ಇನ್ನು ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಳೆಯಾಗುತ್ತಿದ್ದು ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ಬೆಳಗಾವಿ ನಗರದಲ್ಲಿ ನಿರಂತರ ಮಳೆಯಾಗುತ್ತಿದ್ದು ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರಿಗೆ ತೊಂದರೆಯಾಗಿದೆ. ಕೆಲವು ಬಡಾವಣೆಗಳಲ್ಲಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿರುವದರಿಂದ ವಾಹನ ವಾಹನ ಸವಾರರು ಪರದಾಡುವಂತಾಗಿದೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ