ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಲಘು ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ 6.45 ರ ಸುಮಾರಿಗೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.