Breaking News

ಭೂಕಂಪನ: ಬಿರುಕು ಬಿಟ್ಟ ಮನೆ ಗೋಡೆ; ಬತ್ತಿ ಹೋದ ಬಾವಿ!

Spread the love

ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೂ ಕಂಪನದಿಂದಾಗಿ ತಿಕೋಟಾ ಹಾಗೂ ಇಂಡಿ ತಾಲ್ಲೂಕುಗಳಲ್ಲಿ ಅಲ್ಪ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ತಿಳಿಸಿದ್ದಾರೆ.

ತಿಕೋಟಾ ತಾಲ್ಲೂಕಿನ ಅರಕೇರಿ ಮತ್ತು ಅರಕೇರಿ ತಾಂಡಾದಲ್ಲಿ ಎರಡು ಹಳೆಯ ಮನೆಗಳ ಹಿಂಭಾಗದ ಭಾಗವು ಭಾಗಶಃ ಹಾನಿಯಾಗಿದೆ.

ಇದೇ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ, ಅರಕೇರಿ ಗ್ರಾಮದ ಸುತ್ತಲಿನ ತಾಂಡಾಗಳಲ್ಲಿ ಮತ್ತು ಮಜರೆ ಗ್ರಾಮದಲ್ಲಿ ಅಂದಾಜು 48 ಮನೆಗಳ ಗೋಡೆಗಳಲ್ಲಿ ಅಲ್ಪ ಪ್ರಮಾಣದ ಬಿರುಕು ಬಿಟ್ಟಿದ್ದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಭೂ ಕಂಪನದಿಂದಲೇ ಈ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಖಚಿತಪಡಿಸಿದ್ದಾರೆ. ಇದನ್ನು ಹೊರತುಪಡಿಸಿ ತಿಕೋಟಾ ತಾಲ್ಲೂಕಿನ ಯಾವುದೇ ಗ್ರಾಮಗಳಲ್ಲಿ ಭೂ ಕಂಪನದಿಂದ ಜೀವ ಹಾಗೂ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿರುವುದಿಲ್ಲ ಎಂದು ತಿಕೋಟಾ ತಹಶೀಲ್ದಾರ್‌ ಅವರು ಪ್ರಾಥಮಿಕ ವರದಿ ನೀಡಿದ್ದಾರೆ ಎಂದು ಹೇಳಿದ್ದಾರೆ.

ಇಂಡಿ ತಾಲ್ಲೂಕಿನ ಬಳ್ಳೊಳ್ಳಿ ಗ್ರಾಮದಲ್ಲಿ 15 ಅಡಿಯ ಬಾವಿಯ ನೀರು ಬತ್ತಿ ಹೋಗಿದೆ ಎಂದು ಇಂಡಿ ತಹಶೀಲ್ದಾರ್‌ ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ