Home / ಜಿಲ್ಲೆ / ಬಿಜಾಪುರ / ಮಳೆಗಾಗಿ ವಿಜಯಪುರ ‌ಜಿಲ್ಲೆಯಲ್ಲಿ ವಿಶಿಷ್ಟ ಆಚರಣೆ: ಹೂತಿದ್ದ ಶವ ಮೇಲೆ ನೀರು ಹಾಕಿ‌ ಮಳೆಗಾಗಿ ಪ್ರಾರ್ಥನೆ

ಮಳೆಗಾಗಿ ವಿಜಯಪುರ ‌ಜಿಲ್ಲೆಯಲ್ಲಿ ವಿಶಿಷ್ಟ ಆಚರಣೆ: ಹೂತಿದ್ದ ಶವ ಮೇಲೆ ನೀರು ಹಾಕಿ‌ ಮಳೆಗಾಗಿ ಪ್ರಾರ್ಥನೆ

Spread the love

ವಿಜಯಪುರ: ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ(rain)ಯಾಗುತ್ತಿದ್ದು, ಜನ ಜೀವನ ಅಸ್ಥವ್ಯಸ್ತವಾಗಿದೆ.

ಜೊತೆಗೆ ಹಲವೆಡೆ ರೆಡ್​, ಯೊಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಆದರೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಒಂದು ಹನಿ ಮಳೆ ಕೂಡ ಆಗಿಲ್ಲ. ಮಳೆಯಿಲ್ಲದೆ ಜನರು ಕಂಗಾಲಾಗಿದ್ದು, ವಿಶಿಷ್ಟ ಆಚರಣೆ ಮೂಲಕ ದೇವರ ಮೊರೆ ಹೋಗುತ್ತಿದ್ದಾರೆ. ಸದ್ಯ ಮಳೆಗಾಗಿ ವಿಜಯಪುರ ‌ಜಿಲ್ಲೆಯಲ್ಲಿ ಜನರು ವಿಶಿಷ್ಟ ಆಚರಣೆಯೊಂದು ಮಾಡುತ್ತಿದ್ದು, ಈ‌ ಬಗ್ಗೆ ಕೇಳಿದರೆ ಆಶ್ಚರ್ಯವಾಗೋದು‌ ಗ್ಯಾರಂಟಿ. ಸ್ಮಶಾನದಲ್ಲಿ ಹೂತಿದ್ದ ಶವ ಮೇಲೆ ನೀರು ಹಾಕಿ‌ ಮಳೆಗಾಗಿ ಪ್ರಾರ್ಥನೆ ಮಾಡಿರುವಂತಹ ಘಟನೆ ಜಿಲ್ಲೆಯ ದೇವರಹಿಪ್ಪರಗಿ ‌ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. ಕಳೆದ ಶುಕ್ರವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸ್ಮಶಾನದಲ್ಲಿ ‌ಶವ ಹೂತಿರೋ ಸ್ಥಳದಲ್ಲಿ ಎರಡು‌ ಅಡಿ ಮಣ್ಣು ತೆಗೆದು ಗ್ರಾಮಸ್ಥರು ನೀರು ಹಾಕಿದರು.

 

ಟ್ಯಾಂಕರ್ ಮೂಲಕ ಶವದ ಮೇಲೆ ಜನರು ನೀರು ಹಾಕಿದ್ದು, ಕೆಲ ಶವಗಳು ಬಾಯಿ ಬಿಟ್ಟಿರುತ್ತವೆ. ಅಂಥ‌ ಶವಗಳ ಬಾಯಿಗೆ ‌ನೀರು ಹಾಕೋ ಪದ್ದತಿ ಇದಾಗಿದೆ. ಎಲ್ಲೆಲ್ಲಿ ‌ಶವ ಬಾಯಿ ಬಿಟ್ಟಿವೆ ಎಂದು‌ ವ್ಯಕ್ತಿ ಹೇಳಿದ್ದು, ಕೆಲ ಶವಗಳ ಹೂತಿರೋ ಸ್ಥಳದಲ್ಲಿ ಎರಡು ಅಡಿ ಅಗೆದು  ಸ್ಥಳಿಯರು ನೀರು ಹಾಕಿದರು. ಆಧುನಿಕ‌ ಕಾಲದಲ್ಲೂ ಇಂಥ ಆಚರಣೆಗಳನ್ನು ಜನರು ನಂಬುತ್ತಿದ್ದಾರೆ. ಕಾಕತಾಳಿಯವೆಂಬಂತೆ ಶವದ ಬಾಯಿಗೆ ನೀರು ಹಾಕಿದ ಬಳಿಕ ಜಿಟಿಜಿಟಿ‌ ಮಳೆ ಆರಂಭವಾಯಿತು.

 

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ:

ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ ಯಾಗುವ ಮುನ್ಸೂಚನೆ ಇದ್ದು, ಕರಾವಳಿ ಭಾಗಗಳಲ್ಲಿ ಅತ್ಯಂತ ಭಾರೀ ಮಳೆಯಾಗಲಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ ಉತ್ತರ ಒಳಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ ಕಲಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳಭಾಗದಲ್ಲೂ ಅತಿಹೆಚ್ಚು ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಹಾಸನ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


Spread the love

About Laxminews 24x7

Check Also

ಸರಿಯಾಗಿ ಮನೆ ಕೆಲಸ ಮಾಡುತ್ತಿಲ್ಲ, ಮಕ್ಕಳನ್ನು ನೋಡಿಕೊಳ್ಳುತ್ತಿಲ್ಲ ಎಂದು ಕೋಪಗೊಂಡ ಪತಿ ತನ್ನ ಪತ್ನಿ ಮತ್ತು ಆಕೆಯ ತಾಯಿಯನ್ನು ಕೊಲೆಗೈದ

Spread the love ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ‌ ಹಾಗೂ ಆಕೆಯ ತಾಯಿಯನ್ನು ಕೊಲೆ‌ ಮಾಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ