ಕೃಷ್ಣಾ ಹಾಗೂ ಉಪನದಿಗಳಿಗೆ ಪ್ರವಾಹ ಭೀತಿ ಹಿನ್ನಲೆಯಲ್ಲಿ ಬೋಟ್ ಮೂಲಕ ತಹಶೀಲ್ದಾರ ಸಿ.ಎಸ್.ಕುಲಕರ್ಣಿಯವರು ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು.
ಹೌದು ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಇತ್ತ ಚಿಕ್ಕೋಡಿ ತಾಲೂಕಿನ ಮಾಂಜರಿ, ಇಂಗಳಿ, ಚಂದೂರ, ಯಡೂರ ಗ್ರಾಮದ ನದಿಗಳಿಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕೋಡಿ ತಹಶೀಲ್ದಾರ ಸಿ.ಎಸ್.ಕುಲಕರ್ಣಿ ಬೋಟ್ ಮೂಲಕ ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು.
ನಂತರ ನದಿತೀರದ ಜನರ ಜೊತೆಗೆ ತಹಶೀಲ್ದಾರ ಕುಲಕರ್ಣಿ ಕೆಲಹೊತ್ತು ಚರ್ಚೆಯನ್ನು ನಡೆಸಿದರು. ಪ್ರವಾಹದ ಮುಂಜಾಗ್ರತಾ ಕ್ರಮವಾಗಿ ತಾಲೂಕಾಡಳಿತ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ತಹಶೀಲ್ದಾರ್ ಸಿ.ಎಸ್.ಕುಲಕರ್ಣಿ ತಿಳಿಸಿದರು.