Breaking News

ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು: S.P. ಸಂಜೀವ್ ಪಾಟೀಲ್

Spread the love

ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು. ತಮ್ಮ ಹಾಗೂ ತಮ್ಮ ಜೊತೆ ಬಂದವರ ಕುರಿತಂತೆ ಕಾಳಜಿ ವಹಿಸಬೇಕೆಂದು ಬೆಳಗಾವಿ ಎಸ್‍ಪಿ ಡಾ. ಸಂಜೀವ್ ಪಾಟೀಲ್ ಹೇಳಿದ್ದಾರೆ.

ಹೌದು ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರು ಜನಪ್ರಿಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನಿಡುತ್ತಿದ್ದಾರೆ. ಇನ್ನು ಅವರ ಸುರಕ್ಷತೆಯನ್ನು ಸ್ವತಃ ಪ್ರವಾಸಿಗರೇ ಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಇಂದು ಎಸ್‍ಪಿ ಡಾ. ಸಂಜೀವ್ ಪಾಟೀಲ್ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್‍ಗೆ ಭೇಟಿ ನೀಡಿ ಪ್ರವಾಸಿಗರ ರಕ್ಷಣೆಯ ದೃಷ್ಠಿಯಿಂದ ಕ್ರಮ ಕೈಗೊಳ್ಳುವಂತೆ ಅಲ್ಲಿನ ಸ್ಥಳೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮನವಿ ಮಾಡಿದರು.

ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಸಂಜೀವ್ ಪಾಟೀಲ್, ಬೆಳಗಾವಿ ಪ್ರಾಕೃತಿಕವಾಗಿ ಬಹಳ ಸಂಪದ್ಭರಿತವಾಗಿ ಜಿಲ್ಲೆಯಾಗಿದೆ. ಗೋಕಾಕ್ ಫಾಲ್ಸ್ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಅದನ್ನು ವೀಕ್ಷಣೆ ಮಾಡಲು ಜನಸಾಗರವೇ ಹರಿದು ಬರುತ್ತಿದೆ. ಪ್ರವಾಸಿಗರು ಫಾಲ್ಸ್ ವೀಕ್ಷಣೆ ಮಾಡುವಾಗ ನೀರಿನ ಹತ್ತಿರ ಹೋಗುತ್ತಿದ್ದಾರೆ ಎಂದು ಹೇಳುತ್ತಿದ್ದರು. ಹಾಗಾಗಿ ಇಂದು ಇಲ್ಲಿಗೆ ಭೇಟಿ ನೀಡಿದ್ದೇವೆ. ಈಗಾಗಲೇ ಪ್ರವಾಸಿಗರು ನೀರಿನ ಹತ್ತಿರಕ್ಕೆ ಹೋಗದಂತೆ ಕ್ರೈಂ ಸೀನ್ ಟೇಪ್ ಕಟ್ಟಿ ಬ್ಯಾರಿಕೇಡ್ ಹಾಕಿ ಯಾರೂ ನೀರಿಗಿಳಿಯದಂತೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಈ ವಿಚಾರವಾಗಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. 

 


Spread the love

About Laxminews 24x7

Check Also

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಶ್ವಾನ ದಳದ ತಪಾಸಣೆ

Spread the loveಬೆಳಗಾವಿ : ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಬಾಂಬ್ ಇರಿಸಿರುವುದಾಗಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಈಮೇಲ್ ಬಂದ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ