Breaking News
Home / ರಾಜಕೀಯ / ಮಹಿಳಾಮಣಿಗಳೇ, ಮೋದಿ ಸರ್ಕಾರ ಉಚಿತವಾಗಿ ‘ಹೊಲಿಗೆ ಯಂತ್ರ’ ವಿತರಿಸ್ತಿದೆ ; ಅರ್ಜಿ ಪ್ರಕ್ರಿಯೆ ಆರಂಭ, ಇಂದೇ ಅಪ್ಲೈ ಮಾಡಿ

ಮಹಿಳಾಮಣಿಗಳೇ, ಮೋದಿ ಸರ್ಕಾರ ಉಚಿತವಾಗಿ ‘ಹೊಲಿಗೆ ಯಂತ್ರ’ ವಿತರಿಸ್ತಿದೆ ; ಅರ್ಜಿ ಪ್ರಕ್ರಿಯೆ ಆರಂಭ, ಇಂದೇ ಅಪ್ಲೈ ಮಾಡಿ

Spread the love

ದೇಶದ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮತ್ತು ಸ್ವಾವಲಂಬಿಗಳಾಗಲು ಸರ್ಕಾರ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆ (Free Silai Machine Scheme).

ಸರ್ಕಾರ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನ ಉಚಿತವಾಗಿ ನೀಡುತ್ತದೆ. ಈ ಯೋಜನೆಯ ಸಹಾಯದಿಂದ ಮಹಿಳೆಯರು ತಮ್ಮ ಆರ್ಥಿಕ ಅಗತ್ಯಗಳನ್ನ ಪೂರೈಸಿಕೊಳ್ಳಲು ಬೇರೆಯವರ ಮೇಲೆ ಅವಲಂಬಿತರಾಗದಂತೆ ನೋಡಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ. ಅವ್ರು ತಮ್ಮ ಪ್ರತಿಯೊಂದು ಅಗತ್ಯವನ್ನ ತಾವಾಗಿಯೇ ಪೂರೈಸಿಕೊಳ್ಳಲು ಸಮರ್ಥರಾಗಿರಬೇಕು ಮತ್ತು ಅಧಿಕಾರ ಹೊಂದಿರಬೇಕು. ಈ ಉದ್ದೇಶ ಈಡೇರಿಸಲು ಸರ್ಕಾರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸುತ್ತಿದೆ.

ಯಾವುದೇ ಶುಲ್ಕವಿಲ್ಲ
ಈ ಯೋಜನೆಗೆ ಅರ್ಹರಾಗಿರುವ ಮಹಿಳೆಯು ಅರ್ಜಿ ಸಲ್ಲಿಸುವ ಮೂಲಕ ಹೊಲಿಗೆ ಯಂತ್ರ ಯೋಜನೆಯ ಲಾಭವನ್ನು ಪಡೆಯಬಹುದು (Apply For Free Silai Machine Yojana 2022). ದೇಶದ ಎಲ್ಲ ರಾಜ್ಯಗಳಿಗೂ ಕೇಂದ್ರ ಸರ್ಕಾರದ ಯೋಜನೆ ಸಿದ್ಧಪಡಿಸಲಾಗಿದೆ. ಪ್ರತಿ ರಾಜ್ಯದ 50 ಸಾವಿರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನ ನೀಡಲಾಗಿದ್ದು, ಇದಕ್ಕೆ ಯಾವುದೇ ಶುಲ್ಕ ವಿಧಿಸುವುದಿಲ್ಲ.

ಈ ವಯಸ್ಸಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು
20 ರಿಂದ 40 ವರ್ಷದೊಳಗಿನ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಸುಲಭವಾಗಿ ಹೊಲಿಗೆ ಯಂತ್ರವನ್ನ ಉಚಿತವಾಗಿ ಪಡೆಯಬಹುದು ಮತ್ತು ಸ್ವಂತ ಉದ್ಯೋಗವನ್ನ ಪ್ರಾರಂಭಿಸಬಹುದು. ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಯು ಕರ್ನಾಟಕ, ಹರಿಯಾಣ, ಗುಜರಾತ್, ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಂತಹ ರಾಜ್ಯಗಳಲ್ಲಿ ಚಾಲನೆಯಲ್ಲಿದೆ. ಈ ಯೋಜನೆಯ ಲಾಭ ಪಡೆದು ಈ ರಾಜ್ಯಗಳ ಮಹಿಳೆಯರು ತಮ್ಮ ಉದ್ಯೋಗವನ್ನು ಪ್ರಾರಂಭಿಸಬಹುದು. ಇದಕ್ಕಾಗಿ ಅರ್ಜಿ ಸಲ್ಲಿಸಬೇಕು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೌಲಭ್ಯ
ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಇದಕ್ಕಾಗಿ ಮಹಿಳೆಯರು ಆನ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸಬಹುದು. ಯಾರಾದರೂ ಈ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದ್ರೆ, ಅವ್ರು ಮೊದಲು ಅದರ ಅಧಿಕೃತ ವೆಬ್‌ಸೈಟ್ www.india.gov.in ಗೆ ಭೇಟಿ ನೀಡಬೇಕು. ವೆಬ್‌ಸೈಟ್‌ನ ಮುಖಪುಟದಲ್ಲಿ, ಹೊಲಿಗೆಯ ಉಚಿತ ಪೂರೈಕೆಗಾಗಿ ಅರ್ಜಿ ಸಲ್ಲಿಸಲು ನೀವು ಲಿಂಕ್ ಕಾಣಬಹುದು.

ಅಧಿಕಾರಿಗಳು ತನಿಖೆ ನಡೆಸುತ್ತಾರೆ
ಲಿಂಕ್ ಅನ್ನು ಮತ್ತು ಅರ್ಜಿ ನಮೂನೆಯ PDFನ ಪ್ರಿಂಟ್ ಔಟ್ ತೆಗೆದುಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನ ಫಾರ್ಮ್‌ನೊಂದಿಗೆ ಲಗತ್ತಿಸಿ. ಅದರ ನಂತರ ಫಾರ್ಮ್ ಅನ್ನು ಸಂಬಂಧಪಟ್ಟ ಕಚೇರಿಗೆ ಸಲ್ಲಿಸಿ. ಅಧಿಕಾರಿಗಳು ನಿಮ್ಮ ಅರ್ಜಿಯನ್ನು ಪರಿಶೀಲಿಸುತ್ತಾರೆ. ಅರ್ಜಿಯಲ್ಲಿ ನೀಡಿರುವ ಮಾಹಿತಿ ಸರಿಯಾಗಿದ್ದರೆ ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡಲಾಗುವುದು.

ಹೊಲಿಗೆ ಯಂತ್ರವನ್ನು ಉಚಿತವಾಗಿ ಪಡೆಯಲು ಅಗತ್ಯವಾದ ದಾಖಲೆಗಳು
* ಆಧಾರ್ ಕಾರ್ಡ್
* ಜನ್ಮ ದಿನಾಂಕ ಪ್ರಮಾಣಪತ್ರ
* ಆದಾಯ ಪ್ರಮಾಣಪತ್ರ
* ಮೊಬೈಲ್ ನಂಬರ
* ಪಾಸ್ಪೋರ್ಟ್ ಗಾತ್ರದ ಫೋಟೋ
* ಈ ಯೋಜನೆಗೆ ಯಾರು ಅರ್ಹರು

ಅರ್ಜಿದಾರರು ಭಾರತದ ನಾಗರಿಕರಾಗಿರಬೇಕು..!
* ದೇಶದ ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರು ಮಾತ್ರ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತದೆ.
* ಮಹಿಳಾ ಅರ್ಜಿದಾರರ ಪತಿಯ ವಾರ್ಷಿಕ ಆದಾಯ ರೂ.12 ಸಾವಿರ ಮೀರಬಾರದು.
* ವಿಧವೆಯರು ಮತ್ತು ದಿವ್ಯಾಂಗ ಮಹಿಳೆಯರು ಸಹ ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ