ಹಾಸನ ,ಸೆ.14- ಪಕ್ಷದ ಶಾಸಕರ ಕ್ಷೇತ್ರಗಳಿಗೆ ಸಹಕಾರ ಕೋರಿ ಮುಖ್ಯಮಂತ್ರಿಗಳನ್ನು ಭೇಟಿಯಾದರೆ ತಪ್ಪೇನು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ತಮ್ಮ ಶಾಸಕರ ಕ್ಷೇತ್ರಗಳಿಗೆ ಸಹಾಯ ಕೋರಲ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು. ರಾಜಕೀಯ ಒತ್ತಡದಿಂದ ಕಾನೂನು ಬಾಹಿರ ಕೆಲಸಗಳನ್ನು ಮಾಡಿದರೆ ಅಂತಹ ಕೆಲಸಗಳಿಗೆ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ನಿಮಗೆ ತೊಂದರೆ ಎಂದು ಎಚ್ಚರಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ನಿಯೋಜನೆಯಲ್ಲಿ ಭ್ರಷ್ಟಾಚಾರದ ಕುರಿತಂತೆ ಮಾತನಾಡಿದ ಅವರು, ರಾಜಕೀಯ ಒತ್ತಡಗಳಿಗೆ ಒಳಗಾಗಿ ಅಧಿಕಾರಿಗಳು ಕೆಲಸ ಮಾಡಬಾರದು ಎಂದರು.