Breaking News
Home / ರಾಜಕೀಯ / ಬೆಳಗಾವಿಯಲ್ಲಿಯೂ ಕೂಡ ವಿಶ್ವ ಜನಸಂಖ್ಯಾ ದಿನ ಆಚರಿಸಲಾಯಿತು.

ಬೆಳಗಾವಿಯಲ್ಲಿಯೂ ಕೂಡ ವಿಶ್ವ ಜನಸಂಖ್ಯಾ ದಿನ ಆಚರಿಸಲಾಯಿತು.

Spread the love

ಜುಲೈ 11ರಂದು ವಿಶ್ವ ಜನಸಂಖ್ಯಾ ದಿನವನ್ನು ಇಡೀ ವಿಶ್ವದಾಧ್ಯಂತ ಆಚರಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೂಡ ವಿಶ್ವ ಜನಸಂಖ್ಯಾ ದಿನ ಆಚರಿಸಲಾಯಿತು.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿಯ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಕಚೇರಿ ಸಹಯೋಗದಲ್ಲಿ ಬಿಮ್ಸ ಉಪನ್ಯಾಸ ಕೊಠಡಿಯಲ್ಲಿ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ ಉನ್ನತಿಯ ಹೊಸ ಅಧ್ಯಾಯ ಬರೆಯೋಣ ಎಂಬ ಘೋಷವಾಕ್ಯದಡಿ ವಿಶ್ವ ಜನಸಂಖ್ಯಾ ದಿನವನ್ನು ಈ ಬಾರಿ ಆಚರಿಸಲಾಗುತ್ತಿದೆ.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದೆ ಮಂಗಲ ಅಂಗಡಿ ಅವರು 2011ರಲ್ಲಿ ನಮ್ಮ ವಿಶ್ವದ ಜನಸಂಖ್ಯೆ 7 ಮಿಲಿಯನ್ ತಲುಪಿದೆ. ಬರುವ ವರ್ಷಗಳಲ್ಲಿ ಈ ಜನಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ. ಭಾರತದ ಜನಸಂಖ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪುವುದು ಸರ್ಕಾರದ ಗುರಿಯಾಗಿದೆ.

ಪ್ರತಿ ವರ್ಷವೂ ಒಂದು ತಿಂಗಳು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆ ಮಾಡುತ್ತಿದೆ. ಪ್ರಧಾನಿ ಮೋದಿಯವರು ಆಯಷ್ಮಾನ್ ಭಾರತ ಆರೋಗ್ಯ ಕಾರ್ಡ ಸೇರಿ ಅನೇಕ ಆರೋಗ್ಯ ಸೌಲಭ್ಯಗಳನ್ನು ನೀಡಿದ್ದಾರೆ. ಇವುಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ತಾವೆಲ್ಲಾ ಮಾಡಬೇಕು ಎಂದು ಸಲಹೆ ನೀಡಿದರು.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ