ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಸಮಸ್ಯೆಗಳನ್ನು ಕೇಂದ್ರ ಸರಕಾರಕ್ಕೆ ಮುಟ್ಟಿಸುವ ನಿಟ್ಟಿನಲ್ಲಿ ಸಂಸದರು ಈ ಕುರಿತಂತೆ ಧ್ವನಿ ಎತ್ತಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಿ ಸಂಸದರಿಗೆ ಮನವಿಯನ್ನು ಸಲ್ಲಿಸಿದರು.
ಹೌದು ಇಂದು ಬೆಳಗಾವಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಬೇಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಿದರು. ಕಾರ್ಯಕರ್ತೆಯರಿಗೆ ಗ್ರ್ಯಾಚುಟಿ ನೀಡಬೇಕು. ಅಂಗನವಾಡಿ ನೌಕರರ ಸೇವೆಯನ್ನು ಕೇಂದ್ರ ಸರಕಾರ ಪರಿಗಣಿಸಬೇಕು. ಕಾರ್ಯಕರ್ತೆಯರ ಗೌರವ ಧನ ಹೆಚ್ಚಸಿ ವೇತನ ನಿಗದಿ ಮಾಡಿ, ನಮ್ಮನ್ನೂ ಕೂಡ ಕನಿಷ್ಠ ಕೂಲಿ ಕಾಯ್ದೆಯಡಿ ಸೇರಿಸಬೇಕೆಂದು ಒತ್ತಾಯಿಸಿ ಸಂಸದೆ ಮಂಗಳಾ ಅಂಗಡಿರವರಿಗೆ ಮನವಿಯನ್ನು ಸಲ್ಲಿಸಿದರು.
ಈ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರತಿಭಟನಾಕಾರರು, ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಇಂದು ಸಂಸದರ ಮನೆ ಹಾಗೂ ಕಚೇರಿಗಳ ಮುಂದೆ ಹೋರಾಟ ಮಾಡಿ ಅವರಿಗೆ ಮಳೆಗಾಲಯ ಅಧಿವೇಶನದಲ್ಲಿ ಈ ಕುರಿತು ಧ್ವನಿ ಎತ್ತಬೇಕೆಂದು ಆಗ್ರಹಿಸಿ ಬೆಳಗಾವಿಯ ಇಬ್ಬರೂ ಸಂಸದರಿಗೆ ಮನವಿಯನ್ನು ನೀಡುತ್ತಿದ್ದೇವೆ.
ಅಂಗನವಾಡಿ ನೌಕರರು ಐಸಿಡಿಎಸ್ ಯೋಜನೆಯಡಿ ಹೇಳಲಾದ 6 ಮಾರ್ಗದರ್ಶಿ ಸೂತ್ರಗಳನ್ನು ಚಾಚು ತಪ್ಪದೇ ಪಾಲಿಸುತ್ತಿದ್ದಾರೆ. ಆದರೆ ಸರಕಾರ 1975 ರಿಂದ ಇಲ್ಲಿಯ ವರೆಗೆ ಕೇವಲ ಗೌರವ ಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದೇವೆ. ಹಾಗಾಗಿ ನಮಗೆ ಕನಿಷ್ಟ ಕೂಲಿ ಕಾಯ್ದೆಯಡಿ ತರಬೇಕು. ಈ ಮೂಲಕ ನಮಗೂ ಕನಿಷ್ಟ ಕೂಲಿಯನ್ನು ನೀಡಬೇಕು ಎಂದು ಸಂಸದರಿಗೆ ಮನವಿ ಮಾಡಿತ್ತಿದ್ದೇವೆ ಎಂದರು.